ಬೆಳಗಾವಿ: ದೇವಿ ಮೆರವಣಿಗೆ ಮೇಲೆ ಹರಿದ ಟ್ರಕ್, ಮೂವರು ಸಾವು; 10ಕ್ಕೂ ಹೆಚ್ಚು ಮಂದಿಗೆ ಗಾಯ
x

ಬೆಳಗಾವಿ: ದೇವಿ ಮೆರವಣಿಗೆ ಮೇಲೆ ಹರಿದ ಟ್ರಕ್, ಮೂವರು ಸಾವು; 10ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮನಗುತ್ತಿ–ಹತ್ತರಗಿ ಟೋಲ್‌ಗೇಟ್ ಬಳಿ ದುರ್ಗಾಮಾತಾ ದೌಡ್ ದೇವಿ ಮೆರವಣಿಗೆಗೆ ಟ್ರಕ್ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.


Click the Play button to hear this message in audio format

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮನಗುತ್ತಿ ಮತ್ತು ಹತ್ತರಗಿ ಟೋಲ್‌ಗೇಟ್ ಸಮೀಪ ದುರ್ಗಾಮಾತಾ ದೌಡ್ ದೇವಿ ಮೆರವಣಿಗೆಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬೆಳಗಾವಿಗೆ ಭೇಟಿ ನೀಡಿ ಹುಂಚ್ಯಾನಟ್ಟಿ ಗ್ರಾಮಕ್ಕೆ ಮೆರವಣಿಗೆಯಲ್ಲಿ ವಾಪಸ್ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ದೇವಿಯ ಮೂರ್ತಿಯನ್ನು ಟ್ರ್ಯಾಕ್ಟರ್‌ನಲ್ಲಿ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಹಿಂದಿನಿಂದ ಬಂದ ಟ್ರಕ್ ಮೆರವಣಿಗೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರನ್ನು ಪ್ರಕಾಶ್, ಮಹೇಶ್ ಮತ್ತು ದಾನೇಶ್ವರಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಘಟನೆ ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Read More
Next Story