Prime Minister Modi to visit Adichunchanagiri Mutt on April 15
x

ಪ್ರಧಾನಿ ನರೇಂದ್ರ ಮೋದಿ 

Narendra Modi: ಏಪ್ರಿಲ್ 15ರಂದು ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ

ಶ್ರೀಕ್ಷೇತ್ರದಲ್ಲಿ ಭವ್ಯವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಮಂದಿರದಲ್ಲಿ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಮೂಲ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಜರುಗಲಿದೆ.


Click the Play button to hear this message in audio format

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಪ್ರಸಿದ್ಧ ಆಧ್ಯಾತ್ಮಿಕ ಪುಣ್ಯಕ್ಷೇತ್ರವಾದ 'ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ'ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಭೇಟಿ ನೀಡಲಿದ್ದಾರೆ. ಮಠದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 'ಶ್ರೀ ಗುರು ಭೈರವೈಕ್ಯ ಡಾ. ಬಾಲಗಂಗಾಧರನಾಥ ಶ್ರೀಗಳ ಮಂದಿರ'ವನ್ನು ಪ್ರಧಾನಿ ಅಂದು ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಏಪ್ರಿಲ್ 15ರಂದು ಮಠ ಮತ್ತು ದೇವಾಲಯದ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ಶ್ರೀಕ್ಷೇತ್ರದಲ್ಲಿ ಭವ್ಯವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಮಂದಿರದಲ್ಲಿ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಮೂಲ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಜರುಗಲಿದೆ. ಈ ಹಿನ್ನೆಲೆಯಲ್ಲಿ ಮಠದ ಹಾಲಿ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಏಪ್ರಿಲ್ 10ರಿಂದ 15ರವರೆಗೆ ವಿವಿಧ ಧಾರ್ಮಿಕ ಮತ್ತು ಪೂಜಾ ಕೈಂಕರ್ಯಗಳು ನೆರವೇರಲಿವೆ. ಏಪ್ರಿಲ್ 15ರಂದು ಬೆಳಗ್ಗೆ ಪ್ರಧಾನಿ ಮೋದಿಯವರು ನೂತನ ಮಂದಿರವನ್ನು ಉದ್ಘಾಟಿಸಲಿದ್ದಾರೆ.

ಕೆಂಪು ಶಿಲೆಯಲ್ಲಿ ಅರಳಿದ ಭವ್ಯ ಮಂದಿರ

ಉದ್ಘಾಟನಾ ಸಮಾರಂಭದ ಬಳಿಕ ಬಿಜಿಎಸ್ (BGS) ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಶ್ರೀಗಳ ಆಶಯದಂತೆ 175 x 150 ಅಡಿ ವಿಸ್ತೀರ್ಣದಲ್ಲಿ ಈ ಭವ್ಯ ಮಂದಿರವನ್ನು ನಿರ್ಮಾಣ ಮಾಡಲಾಗಿದೆ. ಆಕರ್ಷಕ ಕೆಂಪು ಶಿಲೆ ಹಾಗೂ ವಿವಿಧ ಬಗೆಯ ಕುಸುರಿ ಕೆತ್ತನೆಯ ಶಿಲಾ ಕಲ್ಲುಗಳನ್ನು ಬಳಸಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಅತ್ಯಂತ ಸುಂದರವಾಗಿ ನಿರ್ಮಿಸಲಾಗಿದೆ.

Read More
Next Story