BJPs master plan to win GBA elections: State executive meeting in the city tomorrow
x

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ನಾಯಕರು( ಸಂಗ್ರಹ ಚಿತ್ರ)

ಜಿಬಿಎ ಚುನಾವಣೆ ಗೆಲ್ಲಲು ಬಿಜೆಪಿ ‘ಮಾಸ್ಟರ್ ಪ್ಲಾನ್’: ನಾಳೆ ನಗರದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಹಾಗೂ ಜನಾಭಿಪ್ರಾಯ ಮೂಡಿಸುವ ಬಗ್ಗೆ ಗುರುವಾರದ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಬಿಜೆಪಿ ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ.


Click the Play button to hear this message in audio format

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಾಣೆಗೆ ಬಿಜೆಪಿ ಭರ್ಜರಿ ತಯಾರಿ ಆರಂಭಿಸುತ್ತಿದೆ. ಇತ್ತೀಚೆಗಷ್ಟೇ ಜಿಬಿಎ ಚುನಾವಣೆಗೆ ಉಸ್ತುವಾರಿಗಳನ್ನು ನೇಮಿಸಿದ್ದ ಬಿಜೆಪಿ ಹೈಕಮಾಂಡ್‌ ಇದೀಗ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸುವ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದೆ.

ಗುರುವಾರ(ಫೆ.19) ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಮಹತ್ವದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಡೆಯಲಿದ್ದು, ಮುಂಬರುವ ಚುನಾವಣೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಿದ್ದಾರೆ.‌ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸಂಸ್ಥೆಗಳೇ ಟಾರ್ಗೆಟ್‌

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಕಳೆದ ಎರಡು ವರ್ಷಗಳ ಹಿಂದೆ ನಡೆದಿತ್ತು. ಇದೀಗ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯು ಬಹು ಮುಖ್ಯವಾಗಿದ್ದು, ಎರಡು ವರ್ಷಗಳ ಬಳಿಕ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತ್ ಚುನಾವಣೆ, ಗ್ರೇಟರ್ ಬೆಂಗಳೂರು ಚುನಾವಣಾ ಸಿದ್ದತೆ ಬಗ್ಗೆ ಸಮಾಲೋಚನೆ ಮತ್ತು ಇದರ ಜೊತೆಗೆ ಮುಂದಿನ ವಿಧಾನಸಭೆ ಚುನಾವಣೆ ಸಿದ್ದತೆ ಹೇಗಿರಬೇಕು ಎಂದು ಸಭೆಯಲ್ಲಿ ಸಮಾಲೋಚನೆ ಮಾಡುವ ಸಾಧ್ಯತೆ ಇದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಹಾಗೂ ಜನಾಭಿಪ್ರಾಯ ಮೂಡಿಸುವ ಬಗ್ಗೆ ಗುರುವಾರದ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಬಿಜೆಪಿ ಶಾಸಕರು, ಸಂಸದರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರು ಸೇರಿದಂತೆ ಸಂಘಟನಾತ್ಮವಾಗಿರುವ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ.

ಇತ್ತೀಚೆಗೆ ಸಭೆ ನಡೆಸಿದ್ದ ಬಿಜೆಪಿ

ಗ್ರೇಟರ್ ಬೆಂಗಳೂರು ಯೋಜನೆಯಡಿ ಬೆಂಗಳೂರನ್ನು ಐದು ಪ್ರತ್ಯೇಕ ಪಾಲಿಕೆಗಳಾಗಿ ವಿಭಜಿಸುವ ಸರ್ಕಾರದ ನಿರ್ಧಾರಕ್ಕೆ ಆರಂಭದಲ್ಲಿ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಈಗ ಅದೇ ವಿಭಜನೆಯನ್ನು ತನ್ನ ಲಾಭಕ್ಕೆ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಐದು ಪಾಲಿಕೆಗಳಿಗೂ ಪ್ರತ್ಯೇಕ ತಂತ್ರಗಾರಿಕೆ ರೂಪಿಸುವುದು ಬಿಜೆಪಿಯ ಪ್ರಮುಖ ಉದ್ದೇಶವಾಗಿದೆ. ಪ್ರತಿ ಪಾಲಿಕೆಯಲ್ಲಿಯೂ ಸ್ಥಳೀಯ ನಾಯಕರನ್ನು ಬೆಳೆಸುವುದು ಮತ್ತು ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿ ನಿಲ್ಲುವುದು. ಐದೂ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರ ಹಿಡಿದರೆ, ಇಡೀ ನಗರದ ಮೇಲೆ ಸಂಪೂರ್ಣ ಹಿಡಿತ ಸಾಧಿಸಬಹುದು ಎಂಬುದು ಪಕ್ಷದ ಲೆಕ್ಕಾಚಾರವಾಗಿದೆ. ಆದ್ದರಿಂದಲೇ ಹಿರಿಯ ನಾಯಕ ರಾಮ್ ಮಾಧವ್ ಅವರನ್ನು ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

Read More
Next Story