Karnataka By Election:  ಸಮರ್ಥ್ ಸೋಲಿಸಲು ಮುಸ್ಲಿಂ ನಾಯಕರ ಷಡ್ಯಂತ್ರ, ಹೈಕಮಾಂಡ್‌ಗೆ ದೂರು
x

 ಸಮರ್ಥ್ ಶಾಮನೂರು 

Karnataka By Election: ಸಮರ್ಥ್ ಸೋಲಿಸಲು ಮುಸ್ಲಿಂ ನಾಯಕರ ಷಡ್ಯಂತ್ರ, ಹೈಕಮಾಂಡ್‌ಗೆ ದೂರು

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರಕ್ಕೆ ಅವರ ಮೊಮ್ಮಗ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಲಾಗಿತ್ತು.


Click the Play button to hear this message in audio format

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಸೋಲಿಸಲು ಷಡ್ಯಂತ್ರ ರೂಪಿಸಿದ್ದರು ಎಂದು ಆರೋಪಿಸಿ, ಮೂವರು ಪ್ರಭಾವಿ ಮುಸ್ಲಿಂ ನಾಯಕರ ವಿರುದ್ಧ ಪಕ್ಷದ ಹೈಕಮಾಂಡ್‌ಗೆ ದೂರು ಸಲ್ಲಿಸಲಾಗಿದೆ.

ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಗೂ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದೆ. ಕ್ಷೇತ್ರದಲ್ಲಿ ಅಂದಾಜು 70 ಸಾವಿರ ಮುಸ್ಲಿಂ ಮತದಾರರಿದ್ದು, ಸಮುದಾಯದ ಅಭ್ಯರ್ಥಿಗೇ ಟಿಕೆಟ್ ನೀಡಬೇಕೆಂದು ಈ ನಾಯಕರು ಪಟ್ಟು ಹಿಡಿದಿದ್ದರು. ಆದರೆ, ತಾವು ಹೇಳಿದವರಿಗೆ ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಇವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಅಭ್ಯರ್ಥಿಯನ್ನು ಸೋಲಿಸಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಇವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.

ಟಿಕೆಟ್ ಹಂಚಿಕೆ ಗೊಂದಲ

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರಕ್ಕೆ ಅವರ ಮೊಮ್ಮಗ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಲಾಗಿತ್ತು. ಶಾಸಕರು ಮೃತಪಟ್ಟಾಗ ಅನುಕಂಪದ ಆಧಾರದಲ್ಲಿ ಅವರ ಕುಟುಂಬದವರಿಗೇ ಟಿಕೆಟ್ ನೀಡುವ ಸಂಪ್ರದಾಯದಂತೆ (ಬಾಗಲಕೋಟೆ ಮಾದರಿ) ಸಚಿವರಾದ ಈಶ್ವರ ಖಂಡ್ರೆ ಮತ್ತು ಶರಣಪ್ರಕಾಶ ಪಾಟೀಲ ಅವರ ಒತ್ತಾಸೆಯೊಂದಿಗೆ ಸಮರ್ಥ್ ಅವರಿಗೆ ಮಣೆ ಹಾಕಲಾಗಿತ್ತು.

ಬಂಡಾಯ ಶಮನಗೊಳಿಸಿದ್ದ ಹೈಕಮಾಂಡ್

ಟಿಕೆಟ್ ಹಂಚಿಕೆ ವಿಚಾರದಲ್ಲಿ ಉಂಟಾಗಿದ್ದ ಗೊಂದಲವನ್ನು ಬಗೆಹರಿಸಲು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಲವು ಸುತ್ತಿನ ಮಾತುಕತೆ ನಡೆಸಿ, ಹೈಕಮಾಂಡ್ ನಿರ್ಧಾರದಂತೆ ಸಮರ್ಥ್ ಹೆಸರನ್ನು ಅಂತಿಮಗೊಳಿಸಿದ್ದರು. ಇದಲ್ಲದೆ, ಮುಸ್ಲಿಂ ಸಮುದಾಯದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಾಧಿಕ್ ಪೈಲ್ವಾನ್ ಅವರು, ನಾಮಪತ್ರ ವಾಪಸ್ ಪಡೆಯುವ ಅವಧಿ ಮುಗಿದ ಬಳಿಕ ಕಣದಿಂದ ಹಿಂದೆ ಸರಿದು ಸಮರ್ಥ್ ಅವರಿಗೆ ಅಧಿಕೃತವಾಗಿ ಬೆಂಬಲ ಸೂಚಿಸಿದ್ದರು.

Read More
Next Story