Davangere South By-Election; Youth Congress big bike rally for Samarth Mallikarjun
x

ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ನೇತೃತ್ವದಲ್ಲಿ ಬೈಕ್‌ ರ್ಯಾಲಿ ನಡೆಸಲಾಯಿತು. 

ದಾವಣಗೆರೆ ದಕ್ಷಿಣ ಉಪಚುನಾವಣೆ; ಸಮರ್ಥ್ ಮಲ್ಲಿಕಾರ್ಜುನ್ ಪರ ಯುವ ಕಾಂಗ್ರೆಸ್ ಬೃಹತ್ ಬೈಕ್ ರ‍್ಯಾಲಿ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥಗೌಡ ಅವರ ನೇತೃತ್ವದಲ್ಲಿ ಈ ಬೃಹತ್ ರ‍್ಯಾಲಿ ಜರುಗಿತು. ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಬೈಕ್ ರ‍್ಯಾಲಿಯಲ್ಲಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.


Click the Play button to hear this message in audio format

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಅವರ ಗೆಲುವಿಗಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್, ನಗರದಲ್ಲಿ ಬೃಹತ್ ಬೈಕ್ ರ‍್ಯಾಲಿ ಆಯೋಜಿಸುವ ಮೂಲಕ ಭರ್ಜರಿ ಪ್ರಚಾರ ನಡೆಸಿತು.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥಗೌಡ ಅವರ ನೇತೃತ್ವದಲ್ಲಿ ಈ ಬೃಹತ್ ರ‍್ಯಾಲಿ ಜರುಗಿತು. ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಬೈಕ್ ರ‍್ಯಾಲಿಯಲ್ಲಿ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡು, ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ ಪರವಾಗಿ ಬಿರುಸಿನ ಮತಯಾಚನೆ ಮಾಡಿದರು. ಈ ಮೂಲಕ ಚುನಾವಣಾ ಕಣದಲ್ಲಿ ಕಾಂಗ್ರೆಸ್ ಪಡೆಯು ತನ್ನ ಬಲಪ್ರದರ್ಶನ ಮಾಡಿತು.

ಈ ಪ್ರಚಾರ ರ್ಯಾಲಿಗೆ ಕಾಂಗ್ರೆಸ್ ಪಕ್ಷದ ಹಲವು ಪ್ರಮುಖ ನಾಯಕರು ಸಾಥ್ ನೀಡಿದರು. ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಭಿಷೇಕ್ ದತ್, ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್ ಅವರು ರ‍್ಯಾಲಿಯಲ್ಲಿ ಪಾಲ್ಗೊಂಡು ಕಾರ್ಯಕರ್ತರಿಗೆ ಹುರುಪು ತುಂಬಿದರು.

ಬೈಕ್ ರ‍್ಯಾಲಿಯುದ್ದಕ್ಕೂ ಕಾಂಗ್ರೆಸ್ ಬಾವುಟಗಳನ್ನು ಹಿಡಿದ ಯುವಕರು, ಪಕ್ಷದ ಹಾಗೂ ಅಭ್ಯರ್ಥಿಯ ಪರ ಘೋಷಣೆಗಳನ್ನು ಕೂಗುತ್ತಾ ಮತದಾರರ ಗಮನ ಸೆಳೆದರು.

Read More
Next Story