ಡಿಕೆಶಿ ನಿರಾಳ: ಹಂಗಾಮಿ ಹಂಗಾಮಿ ಸ್ಪೀಕರ್‌ ಅಗಲು ಒಪ್ಪಿದ ಟಿ.ಬಿ.ಜಯಚಂದ್ರ
x
ಸಚಿವ ಸ್ಥಾನ ಸಿಗದೆ ಅತೃಪ್ತರಾಗಿದ್ದ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭೇಟಿಯಾಗಿ ಮನವೊಲಿಸಿದರು.

ಡಿಕೆಶಿ ನಿರಾಳ: ಹಂಗಾಮಿ ಹಂಗಾಮಿ ಸ್ಪೀಕರ್‌ ಅಗಲು ಒಪ್ಪಿದ ಟಿ.ಬಿ.ಜಯಚಂದ್ರ

ಡಿ.ಕೆ. ಶಿವಕುಮಾರ್‌ ಸಚಿವ ಸಂಪುಟದಲ್ಲಿ ಮಂತ್ರಿಯಾಗಬೇಕೆಂದು ಒತ್ತಡ ಹೇರಿದ್ದ ಹಿರಿಯ ನಾಯಕ ಟಿ.ಬಿ. ಜಯಚಂದ್ರ ಅವರು ಕೊನೆಗೂ ವಿಧಾನಸಭೆಯ ಹಂಗಾಮಿ ಸ್ಪೀಕರ್‌ ಆಗಲು ಸಮ್ಮತಿ ಸೂಚಿಸಿದ್ದಾರೆ.


Click the Play button to hear this message in audio format

ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ ತಾವು ಡಿ.ಕೆ. ಶಿವಕುಮಾರ್‌ ಸಚಿವ ಸಂಪುಟದಲ್ಲಿ ಮಂತ್ರಿಯಾಗಲು ಒತ್ತಡ ಹೇರಿ, ವಿಧಾನಸಭೆಯ ಹಂಗಾಮಿ ಸ್ಪೀಕರ್‌ ಅಗಲು ನಿರಾಕರಿಸಿದ್ದರು. ಅದರೆ, ಕೊನೆಗೂ ಮುಖ್ಯಮಂತ್ರಿ ಸಂಧಾನದ ಬಳಿಕ ಸೋಮವಾರದಿಂದ ಆರಂಭವಾಗುವ ವಿಧಾನಸಭಾ ಅಧಿವೇಶನದಲ್ಲಿ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಒಪ್ಪಿಗೆ ಸೂಚಿಸಿದ್ದಾರೆ.

ಸಚಿವ ಸ್ಥಾನ ನಿರಾಕರಣೆಯಾದ ಬಳಿಕ ತಾವು ಹಂಗಾಮಿ ಸ್ಪೀಕರ್‌ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದ ಜಯಚಂದ್ರ ಅವರು, ತಾವು ಸದನದಲ್ಲಿ ಪ್ರತ್ಯೇಕ ಆಸನದಲ್ಲಿ ಕೂರುವ ಬಗ್ಗೆಯೂ ಆಲೋಚಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಕಾಂಗ್ರೆಸ್‌ ಹೈಕಮಾಂಡ್‌ ಅನ್ನು ಒತ್ತಡಕ್ಕೆ ಸಿಲುಕಿಸಿದ್ದರು. ಆದರೆ, ಶನಿವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಸಮಾಧಾನ ಪಡಿಸಿದ ಬಳಿಕ ತಮ್ಮ ಟಿ.ಬಿ. ಜಯಚಂದ್ರ ತಮ್ಮ ನಿಲುವು ಬದಲಿಸಿದ್ದರು.

ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಆಗಸ್ಟ್ 13ರಿಂದ 27ರವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನ ಸಭೆ ಅಧಿವೇಶನವನ್ನು ಅವರು ನಡೆಸಿಕೊಡಲಿದ್ದು, ಸೋಮವಾರ ವಿಧಾನಸಭಾ ಅಧ್ಯಕ್ಷರ ಕಚೇರಿಗೆ ತೆರಳಿ ಕಾರ್ಯ ಆರಂಭಿಸಲಿದ್ದಾರೆ. 1978ರಲ್ಲಿ ಮೊದಲ ಬಾರಿಗೆ ಶಾಸಕರಾದ ಅವರು, 7 ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ, ವಿಧಾನಸಭೆಯ ಉಪನಾಯಕರಾಗಿ ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ.

"16ನೇ ವಿಧಾನಸಭೆಯ ಎಂಟನೇ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನ ಸೋಮವಾರದಿಂದ ಆರಂಭಿಸಲಾಗುವುದು," ಎಂದು ಟಿ.ಬಿ ಜಯಚಂದ್ರ ಅವರು ತಿಳಿಸಿದ್ದಾರೆ.

ಅಧಿವೇಶನದ ಮೊದಲ ದಿನವಾದ ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಡಿ ಸುಧಾಕರ್ , ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಸೇರಿದಂತೆ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು. ಶುಕ್ರವಾರದಿಂದ ನಿಗದಿತ ವೇಳಾಪಟ್ಟಿಯಂತೆ ಕಲಾಪ ನಡೆಯಲಿದೆ.

ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರ ಜತೆ ವಿಧಾನಸಭೆಯ ಹಂಗಾಮಿ ಸ್ಪೀಕರ್‌ ಟಿ.ಬಿ. ಜಯಚಂದ್ರ ಅವರು ಚರ್ಚೆ ನಡೆಸುತ್ತಿರುವುದು.

ಸದನದಲ್ಲಿ ಏನೇನು ನಡೆಯಲಿದೆ?

ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದ ಸಂದರ್ಭದಲ್ಲಿ ಅವರೊಂದಿಗೆ ಡಾ.ಜಿ.ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರುಗಳಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಕಳೆದ ಸೋಮವಾರ ನಡೆದ ಮೊದಲ ಸಂಪುಟ ವಿಸ್ತರಣೆಯಲ್ಲಿ ಸಚಿವರಾದ 19 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಬೇಕಿದ್ದು, ಅಧಿವೇಶನ ಆರಂಭಕ್ಕೆ ಮುನ್ನ ಸಚಿವರುಗಳಿಗೆ ಖಾತೆಗಳನ್ನು ಹಂಚುವ ಸಂಭವವಿದೆ.

ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆಗಳು, ವಿಧೇಯಕಗಳ ಮಂಡನೆ, ನೂತನ ವಿಧಾನಸಭಾ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ಪ್ರಸ್ತಾವ , ಅರ್ಧ ಗಂಟೆ ಕಾಲಾವಧಿ ಚರ್ಚೆ, ಶೂನ್ಯ ವೇಳೆ, ನಿಯಮ 69 ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ, ಅಧಿಕೃತ ನಿರ್ಣಯಗಳು, ವರದಿಗಳನ್ನು ಒಪ್ಪಿಸುವುದು ಸೇರಿದಂತೆ ಕಾರ್ಯಕಲಾಪಗಳ ಪಟ್ಟಿ ಸಿದ್ಧಪಡಿಸಲು ಜಯಚಂದ್ರ ಅವರು ಗಮನವಹಿಸಲಿದ್ದಾರೆ.

ಮುಂಗಾರು ಮಳೆ ಸಕಾಲಕ್ಕೆ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಿಕೆ, ಬಿಡದಿ ಟೌನ್ ಷಿಪ್ ವಿಷಯಗಳು ಸದನಗಳಲ್ಲಿ ತೀವ್ರ ಚರ್ಚೆಯಾಗುವ ನಿರೀಕ್ಷೆಗಳಿವೆ.

1978ರಲ್ಲಿ ಮೊದಲ ಬಾರಿಗೆ ಶಾಸಕರಾದ ಅವರು, 7 ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ, ವಿಧಾನಸಭೆಯ ಉಪನಾಯಕರಾಗಿ ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ.

Read More
Next Story