It is alarming that drugs, which were once confined to the capital, have now reached Mysore.
x

ಗೃಹ ಸಚಿವ ಡಾ.ಜಿ. ಪರಮೇಶ್ವರ್‌

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ನಿಗಾ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕೆಂಬ ಒತ್ತಡ ಬರುತ್ತಿದೆ. ಈ ಬಗ್ಗೆ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಳ್ಳಲಿದೆ.


Click the Play button to hear this message in audio format

ದೇಶದಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಅಕ್ರಮ ಬಾಂಗ್ಲಾ ವಲಸಿಗರ ಬಂಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಜಾಗೃತರಾಗಿದ್ದಾರೆ.

ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. " ಒಂದು ತಿಂಗಳಿಂದ ಪ್ರತಿ ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ," ಎಂದು ಅವರು ಹೇಳಿದ್ದಾರೆ.

ಸೋಮವಾರ(ಫೆ.23) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಅಕ್ರಮ ಬಾಂಗ್ಲಾ ವಲಸಿಗರು ಕಾಫಿ ತೋಟ, ಕಟ್ಟಡಗಳಲ್ಲಿ ಕೆಲಸ ಮಾಡುತ್ತಾರೆ ಎಂಬುದನ್ನು ವಿಪಕ್ಷದವರು ಹೇಳಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಪ್ರತಿ ಪೊಲೀಸ್ ಠಾಣೆ ಹಂತದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ" ಎಂದು ಹೇಳಿದರು.

ಹಬ್ಬಗಳನ್ನು ಸಂಭ್ರಮದಿಂದ ಆಚರಿಸಿ

ರಂಜಾನ್ ಹಬ್ಬ ಹಾಗೂ ಹೋಳಿ ಹಬ್ಬ ಆಚರಣೆ ವೇಳೆ ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಕೊಡಬಾರದು. ಸಂತೋಷದಿಂದ ಹಬ್ಬ ಆಚರಿಸಬೇಕು. ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ನಡೆಸಲು ಆವಕಾಶವಿಲ್ಲ. ಅದಕ್ಕೆ ಅವಕಾಶ ಕೊಡುವುದೂ ಇಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕಾಲೇಜಿನಲ್ಲಿ ಚುನಾವಣೆ, ಶೀಘ್ರ ನಿರ್ಧಾರ

ಈ ಹಿಂದೆ ಕೆ.ಹೆಚ್.ರಂಗನಾಥ್ ಉನ್ನತ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ನಡೆಯುತ್ತಿದ್ದ ಚುನಾವಣೆ ವೇಳೆ ಘರ್ಷಣೆಗಳು ನಡೆದಿದ್ದವು. ಆ ಕಾರಣಕ್ಕಾಗಿ ವಿದ್ಯಾರ್ಥಿ ಚುನಾವಣೆಗಳನ್ನು ನಿಷೇಧಿಸಲಾಗಿತ್ತು. ಚುನಾವಣೆ ನಡೆದರೆ ವಿದ್ಯಾರ್ಥಿಗಳ ನಡುವೆ ಗುಂಪುಗಳಾಗಿ ಹೊಡೆದಾಡಿಕೊಳ್ಳುತ್ತಾರೆ ಎಂಬ ಕಾರಣದಿಂದ ನಾನು ಉನ್ನತ ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಸಿಂಡಿಕೇಟ್ ಚುನಾವಣೆಯನ್ನು ಬ್ಯಾನ್ ಮಾಡಲಾಯಿತು. ಈಗ ವಿದ್ಯಾರ್ಥಿ ಚುನಾವಣೆ ನಡೆಸುವ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕೆಂಬ ಒತ್ತಡ ಬರುತ್ತಿದೆ. ಈ ಬಗ್ಗೆ ಸಚಿವ ಸಂಪುಟ ಸಭೆ ಏನು ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಶೀಘ್ರವೇ ತಿಳಿಸಲಾಗುವುದು ಎಂದರು.

ದಲಿತ ಸಿಎಂ ಹೈಕಮಾಂಡ್‌ ನಿರ್ಧಾರ

"ದಲಿತ ಸಿಎಂ ವಿಚಾರ ವಿರೋಧ ಪಕ್ಷದವರು ಮಾಡುತ್ತಿರುವ ಕೆಲಸ. ಪ್ರತಿಪಕ್ಷ ತಮ್ಮ ವಿಚಾರಗಳನ್ನು ಮುಚ್ಚಿಟ್ಟುಕೊಳ್ಳಲು ಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಆಡಳಿತ ಮಾಡುತ್ತಿಲ್ಲವೇ? ಕಳೆದ ಹನ್ನೆರಡು ದಿನಗಳಿಂದ ಬಜೆಟ್ ಕುರಿತು ವಿವಿಧ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಕೂಗು ವಿಚಾರವನ್ನು ವಿರೋಧ ಪಕ್ಷದವರು ಸುಮ್ಮನೆ ಹೊರಗೆ ತರುತ್ತಿದ್ದಾರೆ. ದಲಿತ ಸಿಎಂ ಕಾಂಗ್ರೆಸ್ ಪಕ್ಷದವರೆ ಮಾಡಬೇಕಲ್ಲ? ಇನ್ಯಾರು ಮಾಡುತ್ತಾರೆ. ಸಂದರ್ಭ ಬಂದಾಗ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

ಸಾಮಾಜಿಕ ನ್ಯಾಯದ ಪರ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ. ಆ ಸಿದ್ಧಾಂತದ ಮೇಲೆ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಇದರಲ್ಲಿ ಹೊಸದೇನು ಇಲ್ಲ. ಸಾಮಾಜಿಕ ನ್ಯಾಯದ ಮೇಲೆ ಬದ್ಧರಾಗಿದ್ದು, ಹಿಂದಿನಿಂದಲೂ ಸಾಮಾಜಿಕ ನ್ಯಾಯದ ಪರವಾಗಿದ್ದಾರೆ. ಹೊಸದಾಗಿ ಇವತ್ತು ಮಾಡುತ್ತಿಲ್ಲ ಎಂದು ತಿಳಿಸಿದರು.

Read More
Next Story