
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಬಿ.ಕೆ. ಹರಿಪ್ರಸಾದ್, ಡಿ.ಕೆ. ಶಿವಕುಮಾರ್ ನಾಯಕತ್ವ ಇಡೀ ದೇಶಕ್ಕೆ ಹೊಸ ದಿಕ್ಸೂಚಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
1980ರ ರಿಂದ ಸೇವಾದಳ, ಎನ್ಎಸ್‌ಯುಐ ಮೂಲಕ ರಾಜಕಾರಣಕ್ಕೆ ಬಂದ ಬಿ.ಕೆ. ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿಯಾಗಿ ಇಡೀ ದೇಶದಲ್ಲಿ 19ಕ್ಕು ಹೆಚ್ಚು ರಾಜ್ಯಗಳಲ್ಲಿ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ.
ಪಕ್ಷನಿಷ್ಠೆ, ಸೈದ್ಧಾಂತಿಕ ಬದ್ಧತೆಗೆ ಇಡೀ ದೇಶದಲ್ಲಿ ಹೆಸರು ಮಾಡಿರುವ ಬಿ.ಕೆ. ಹರಿಪ್ರಸಾದ್ ನೇತೃತ್ವದ ಪಕ್ಷ ಸಂಘಟನೆ ಮತ್ತು ಅಭಿವೃದ್ಧಿಯನ್ನೇ ಧ್ಯೇಯವಾಗಿಟ್ಟುಕೊಂಡ ಡಿ.ಕೆ. ಶಿವಕುಮಾರ್ ಅವರ ಆಡಳಿತದ ಮೂಲಕ ಕರ್ನಾಟಕದ ಕಾಂಗ್ರೆಸ್ ಇಡೀ ದೇಶಕ್ಕೆ ಹೊಸ ದಿಕ್ಸೂಚಿ ನೀಡಲಿದೆ. ಆಮೂಲಕ ಮತ್ತೆ ದೇಶವ್ಯಾಪಿ ಕಾಂಗ್ರೆಸ್ಸೀಕರಣಕ್ಕೆ ನಾಂದಿ ಹಾಡಲಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ (ಜೂ.21) ನಡೆದ ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಜನಪರ ಮತ್ತು ಅಭಿವೃದ್ಧಿ ಪರ ಆಡಳಿತಕ್ಕಾಗಿ ಕಾಂಗ್ರೆಸ್ ಸರ್ಕಾರಕ್ಕೆ ಜನಮೆಚ್ಚುಗೆ ಇದೆ ಎನ್ನುವುದಕ್ಕೆ ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಂದಿರುವ ಫಲಿತಾಂಶ ಸಾಕ್ಷಿಯಾಗಿದೆ. ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಶಾಸಕರೇ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದ್ದು ಇಡೀ ದೇಶಕ್ಕೆ ಹೊಸ ಸಂದೇಶವನ್ನು ನೀಡಿದೆ. ಇಡೀ ದೇಶದಲ್ಲಿ ಬಿಜೆಪಿಯ ದ್ವೇಷದ ರಾಜಕಾರಣ ವಿಜೃಂಭಿಸುತ್ತಿದ್ದರೆ, ರಾಜ್ಯದಲ್ಲಿ ಸ್ನೇಹದ ರಾಜಕಾರಣ ಕಾಣುತ್ತಿದ್ದೇವೆ ಎಂದರು.
ಸಮಾವೇಶದ ಭಾಗವಹಿಸಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಬಿ.ಕೆ. ಹರಿಪ್ರಸಾದ್ ಯುವಕರಿಗೆ ಮಾದರಿ
1980ರ ಕಾಲದಲ್ಲಿ ಸೇವಾದಳ, ಎನ್ಎಸ್‌ಯುಐ ಮೂಲಕ ರಾಜಕಾರಣಕ್ಕೆ ಬಂದ ಬಿ.ಕೆ. ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿಯಾಗಿ ಇಡೀ ದೇಶದಲ್ಲಿ 19ಕ್ಕು ಹೆಚ್ಚು ರಾಜ್ಯಗಳಲ್ಲಿ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಸುದೀರ್ಘ ರಾಜಕಾರಣದಲ್ಲಿ ಎಂದೂ ಅಧಿಕಾರದ ಹಿಂದೆ ಹೋದವರಲ್ಲ. ಸದಾ ತನ್ನ ಕರ್ಮವನ್ನು ಮಾಡುತ್ತಲೇ ಬಂದ ಬಿ.ಕೆ. ಹರಿಪ್ರಸಾದ್ ಮತ್ತು ಡಿ.ಕೆ. ಶಿವಕುಮಾರ್ ಅವರನ್ನು ಗುರುತಿಸಿ ಹೈಕಮಾಂಡ್ ಗುರುತರ ಜವಾಬ್ದಾರಿ ಕೊಟ್ಟಿದೆ. ಮುಖ್ಯಮಂತ್ರಿ ಆದರೂ ಡಿ.ಕೆ. ಶಿವಕುಮಾರ್ ಅವರು ತಾನೊಬ್ಬ ಜನಸೇವಕ ಎಂದೇ ಹೇಳುತ್ತಾರೆ. ಇವರಿಬ್ಬರ ರಾಜಕೀಯ ಹಾದಿ ಪಕ್ಷದ ಯುವ ಕಾರ್ಯಕರ್ತರಿಗೆ ಮಾದರಿಯಾಗಿದೆ ಎಂದು ಹೇಳಿದರು.
ಕಾರ್ಯಕರ್ತರೇ ಪಕ್ಷದ ಜೀವಾಳ
ಇವರ ನಾಯಕತ್ವದಲ್ಲಿ ಮುಂದಿನ ಗ್ರಾಮ ಪಂಚಾಯತ್ ಮತ್ತು 2028ರ ಚುನಾವಣೆಯನ್ನು ಕಾಂಗ್ರೆಸ್ ಅಭೂತಪೂರ್ವ ರೀತಿಯಲ್ಲಿ ಗೆಲ್ಲಲಿದೆ. ಆಮೂಲಕ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ಸಿಗಲಿದೆ. ಇದಕ್ಕಾಗಿ ನಮ್ಮೆಲ್ಲ ಕಾರ್ಯಕರ್ತರು ಪಕ್ಷ ಸಂಘಟನೆಗಾಗಿ ಶಕ್ತಿ ತುಂಬುವ ಕೆಲಸ ಮಾಡಬೇಕಾಗಿದೆ. “ಕಾರ್ಯಕರ್ತರೇ ಪಕ್ಷದ ಜೀವಾಳ. ಕಾರ್ಯಕರ್ತರಿಲ್ಲದೆ ಪಕ್ಷವಿಲ್ಲ, ಪಕ್ಷವಿಲ್ಲದೆ ಸರ್ಕಾರವಿಲ್ಲ”, ಗ್ರಾಮ ಮಟ್ಟದಿಂದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು. “ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವದಲ್ಲಿ ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಹಾಗೂ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ವಿಜಯದ ನೂತನ ಇತಿಹಾಸ ಬರೆಯಲಿದೆ” ಎಂದರು.

