ಕರ್ನಾಟಕ ವಿಧಾನಪರಿಷತ್ ಚುನಾವಣೆ: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
x

ಕರ್ನಾಟಕ ವಿಧಾನಪರಿಷತ್ ಚುನಾವಣೆ: ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಿಂದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಕಚೇರಿಯ ಉಸ್ತುವಾರಿ ಅರುಣ್ ಸಿಂಗ್ ಅವರು ಪತ್ರಿಕಾ ಪ್ರಕಟಣೆ ಮೂಲಕ ಈ ಘೋಷಣೆ ಮಾಡಿದ್ದಾರೆ.


Click the Play button to hear this message in audio format

ಕರ್ನಾಟಕ ವಿಧಾನಪರಿಷತ್‌ನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಮಂಗಳವಾರ (ಮಾರ್ಚ್ 10) ಬಿಡುಗಡೆ ಮಾಡಿದೆ.

ನವದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಿಂದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಕಚೇರಿಯ ಉಸ್ತುವಾರಿ ಅರುಣ್ ಸಿಂಗ್ ಅವರು ಪತ್ರಿಕಾ ಪ್ರಕಟಣೆ ಮೂಲಕ ಈ ಘೋಷಣೆ ಮಾಡಿದ್ದಾರೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ರಾಜ್ಯದ ಮೂರು ಪ್ರಮುಖ ವಿಧಾನಪರಿಷತ್ ಕ್ಷೇತ್ರಗಳಿಗೆ ಈ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?

ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿರುವ ಅಧಿಕೃತ ಪಟ್ಟಿಯಂತೆ ಒಟ್ಟು ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ : ಶಶಿಲ್ ಜಿ. ನಮೋಶಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎಸ್. ವಿ. ಸಂಕನೂರ, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೆ. ಎಂ. ಸುರೇಶ್ ಅವರನ್ನು ಆಯ್ಕೆ ಮಾಡಲಾಗಿದೆ.

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವ ಹಾಗೂ ಮೇಲ್ಮನೆಯಲ್ಲಿ ಪಕ್ಷದ ಬಲವನ್ನು ವೃದ್ಧಿಸುವ ನಿಟ್ಟಿನಲ್ಲಿ ಬಿಜೆಪಿ, ಅನುಭವಿ ಹಾಗೂ ಪ್ರಭಾವಿ ನಾಯಕರಿಗೆ ಮಣೆಹಾಕಿದೆ. ಈ ಮೂವರೂ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ವ್ಯಾಪಕ ಜನಸಂಪರ್ಕ ಹಾಗೂ ಹಿಡಿತ ಹೊಂದಿದ್ದು, ಪಕ್ಷವು ಅವರ ಗೆಲುವಿನ ಮೇಲೆ ಭಾರಿ ವಿಶ್ವಾಸವಿಟ್ಟು ಟಿಕೆಟ್ ನೀಡಿದೆ. ಅಭ್ಯರ್ಥಿಗಳ ಘೋಷಣೆಯಾಗುತ್ತಿದ್ದಂತೆಯೇ ಆಯಾ ಕ್ಷೇತ್ರಗಳಲ್ಲಿ ಚುನಾವಣಾ ಕಣ ರಂಗೇರಲಾರಂಭಿಸಿದ್ದು, ಪ್ರಚಾರ ಕಾರ್ಯಗಳು ಇನ್ನಷ್ಟು ಚುರುಕುಗೊಳ್ಳಲಿವೆ.

Read More
Next Story