ಗ್ರಾಮ ಸ್ವರಾಜ್ಯದ ಕಲ್ಪನೆಗೆ ಕೇಂದ್ರ ಸರ್ಕಾರ ಪೆಟ್ಟು: ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ
x

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ "ನರೇಗಾ ಬಚಾವ್ ಸಂಗ್ರಾಮ್" ಪ್ರತಿಭಟನೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಗ್ರಾಮ ಸ್ವರಾಜ್ಯದ ಕಲ್ಪನೆಗೆ ಕೇಂದ್ರ ಸರ್ಕಾರ ಪೆಟ್ಟು: ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

ಮಹಾತ್ಮ ಗಾಂಧಿಯವರ 'ಗ್ರಾಮ ಸ್ವರಾಜ್ಯ'ದ ಕನಸಿಗೆ ಕೇಂದ್ರ ಸರ್ಕಾರ ಕೊಡಲಿ ಪೆಟ್ಟು ನೀಡುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಅವರು ಆರೋಪಿಸಿದ್ದಾರೆ.


Click the Play button to hear this message in audio format

ಪ್ರಸ್ತುತ ಕೇಂದ್ರ ಸರ್ಕಾರವು ಗ್ರಾಮ ಪಂಚಾಯತಿಗಳ ಅಧಿಕಾರವನ್ನು ಕಸಿದುಕೊಳ್ಳುವ ಮೂಲಕ ಗಾಂಧೀಜಿಯವರ ಆಶಯಕ್ಕೆ ಪೆಟ್ಟು ನೀಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅವರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆ.ಪಿ.ಸಿ.ಸಿ ವತಿಯಿಂದ ಆಯೋಜಿಸಲಾಗಿದ್ದ`ನರೇಗಾ ಬಚಾವ್ ಸಂಗ್ರಾಮ್' ಆಂದೋಲನ ಹಾಗೂ ರಾಜಭವನ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮನರೇಗಾ ಯೋಜನೆ ಜಾರಿಗೆ ಬರುವ ಮೊದಲು ಗ್ರಾಮ ಪಂಚಾಯತಿಗಳು ಕನಿಷ್ಠ ವಿದ್ಯುತ್ ಬಿಲ್ ಪಾವತಿಸಲು ಕೂಡ ಕಷ್ಟಪಡುತ್ತಿದ್ದವು. ಆದರೆ ಈ ಯೋಜನೆಯ ನಂತರ ಪಂಚಾಯತಿಗಳು ಆರ್ಥಿಕವಾಗಿ ಸದೃಢಗೊಂಡಿವೆ. ಇಂದು ಕೇಂದ್ರ ಸರ್ಕಾರವು ಯಾರನ್ನೂ ಸಂಪರ್ಕಿಸದೆ, ಕೇವಲ ಎಂಟು ಗಂಟೆಗಳ ಕಾಲ ಚರ್ಚೆ ನಡೆಸಿ ಮನರೇಗಾ ಬದಲು 'ವಿಬಿ ಜಿ ರಾಮ್ ಜಿ' ಕಾಯ್ದೆಯನ್ನು ತರಾತುರಿಯಲ್ಲಿ ಜಾರಿಗೆ ತರಲು ಮುಂದಾಗಿದೆ. ಕೇಂದ್ರ ಸರ್ಕಾರಕ್ಕೆ ಕೂಲಿ ಕಾರ್ಮಿಕರ ಮತ್ತು ರೈತರ ಹಿತಕ್ಕಿಂತ ಬಂಡವಾಳ ಶಾಹಿಗಳ ಹಿತವೇ ಮುಖ್ಯವಾಗಿದೆ ಎಂದು ಸಚಿವರು ಟೀಕಿಸಿದರು.

ಕೇಂದ್ರ ಸರ್ಕಾರವು ಮನರೇಗಾ ಯೋಜನೆಯನ್ನು ರದ್ದುಗೊಳಿಸಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೊಳಿಸಲು‌ ಹೊರಟಿದೆ. ಕೇಂದ್ರ ಸರ್ಕಾರಕ್ಕೆ ರೈತರ, ಮಹಿಳೆಯರು, ಕೂಲಿ ಕಾರ್ಮಿಕರ ಬಗ್ಗೆ ಚಿಂತೆ ಇಲ್ಲ.‌ ಕೇವಲ ಬಂಡವಾಳ ಶಾಹಿಗಳ ಪರ ನಿಂತಿದೆ. ಯಾರನ್ನೂ ಸಂಪರ್ಕಿಸದೇ ತರಾತುರಿಯಲ್ಲಿ ಕೇವಲ 8 ಗಂಟೆಗಳಲ್ಲಿ ಚರ್ಚೆ ನಡೆಸಿ‌ ಈ ಕಾಯ್ದೆಯನ್ನು ಜಾರಿಗೊಳಿಸಿದೆ ಎಂದು ಸಚಿವರು ದೂರಿದರು.

ಇದೇ ಸಂದರ್ಭದಲ್ಲಿ ಗಣರಾಜ್ಯೋತ್ಸವದಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಸೂಕ್ತ ಸ್ಥಾನ ನೀಡದೆ ಮೂರನೇ ಸಾಲಿನಲ್ಲಿ ಕುರಿಸಿ ಅವಮಾನ ಮಾಡಲಾಗಿದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರ ಹಿಂದಿ ಭಾಷಣವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕನ್ನಡಕ್ಕೆ ಸರಾಗವಾಗಿ ಅನುವಾದಿಸಿ ಗಮನ ಸೆಳೆದರು. ಈ ಬೃಹತ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು.

Read More
Next Story