ಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಸಿಬಿಐಗೆ ವಹಿಸಲೇಬೇಕು: ಆರೋಪಿ ದೇವರಾಜೇಗೌಡ ಆಗ್ರಹ
x

ಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಸಿಬಿಐಗೆ ವಹಿಸಲೇಬೇಕು: ಆರೋಪಿ ದೇವರಾಜೇಗೌಡ ಆಗ್ರಹ

ಈ ಪ್ರಕರಣದಲ್ಲಿ ಎಸ್ಐಟಿ ತನಿಖೆಯು ಸಂಪೂರ್ಣವಾಗಿ ದಾರಿ ತಪ್ಪಿದೆ ಎಂದು ಆರೋಪಿಸಿರುವ ದೇವರಾಜೇಗೌಡ, ತನಿಖಾ ತಂಡವು ರಾಜ್ಯ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಕಿಡಿಕಾರಿದ್ದಾರೆ


Click the Play button to hear this message in audio format

ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಹಂಚಿಕೆ ಪ್ರಕರಣವನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರಕರಣದ 6ನೇ ಆರೋಪಿ ದೇವರಾಜೇಗೌಡ ಆಗ್ರಹಿಸಿದ್ದಾರೆ. ವಿಶೇಷ ತನಿಖಾ ತಂಡ (ಎಸ್ಐಟಿ) ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬೆನ್ನಲ್ಲೇ 'ದ ಫೆಡರಲ್ ಕರ್ನಾಟಕ'ಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಈ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಪೆನ್‌ಡ್ರೈವ್ ಹಂಚಿಕೆಯ ಹಿಂದಿರುವ ಕಾಣದ ಕೈಗಳು ಹಾಗೂ ಎಸ್ಐಟಿ ತನಿಖೆಯಲ್ಲಿ ನಡೆದಿರುವ ಗಂಭೀರ ಲೋಪದೋಷಗಳ ಬಗ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.

ಎಸ್ಐಟಿ ವಿರುದ್ಧ ಗಂಭೀರ ಆರೋಪ

ಈ ಪ್ರಕರಣದಲ್ಲಿ ಎಸ್ಐಟಿ ತನಿಖೆಯು ಸಂಪೂರ್ಣವಾಗಿ ದಾರಿ ತಪ್ಪಿದೆ ಎಂದು ಆರೋಪಿಸಿರುವ ದೇವರಾಜೇಗೌಡ, ತನಿಖಾ ತಂಡವು ರಾಜ್ಯ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಪ್ರಭಾವಿ ರಾಜಕೀಯ ನಾಯಕರ ಒತ್ತಡಕ್ಕೆ ಮಣಿದು, ಈ ಪ್ರಕರಣದ ಪ್ರಮುಖ ರೂವಾರಿಗಳನ್ನು ಹಾಗೂ ನಿಜವಾದ ಆರೋಪಿಗಳನ್ನು ಚಾರ್ಜ್‌ಶೀಟ್‌ನಿಂದ ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಪೆನ್‌ಡ್ರೈವ್ ಹಂಚಿಕೆಯ ಅಸಲಿ ರಹಸ್ಯ ಮತ್ತು ಷಡ್ಯಂತ್ರವನ್ನು ಎಸ್ಐಟಿ ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಅವರು ದೂರಿದ್ದಾರೆ.

ಹೈಕೋರ್ಟ್ ಮೊರೆ, ಸಿಬಿಐ ತನಿಖೆಯ ವಿಶ್ವಾಸ

ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಈ ಕೇಸ್ ಅನ್ನು ಕಡ್ಡಾಯವಾಗಿ ಸಿಬಿಐ (CBI) ತನಿಖೆಗೆ ಒಪ್ಪಿಸಲೇಬೇಕು, ಅಲ್ಲಿಯವರೆಗೂ ನಾನು ಯಾವುದೇ ಕಾರಣಕ್ಕೂ ಸುಮ್ಮನಿರುವುದಿಲ್ಲ ಎಂದು ಅವರು ಗುಡುಗಿದ್ದಾರೆ. ಎಸ್ಐಟಿ ತನಿಖೆಯ ಲೋಪಗಳ ವಿರುದ್ಧ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿರುವ ಅವರು, ರಾಜ್ಯ ಸರ್ಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಗಳಿಂದ ನ್ಯಾಯ ಸಿಗುವ ಭರವಸೆ ಇಲ್ಲ ಎಂದಿದ್ದಾರೆ. ಅಂತಿಮವಾಗಿ ಪ್ರಕರಣದ ಸಿಬಿಐ ತನಿಖೆಯ ಕುರಿತು ಹೈಕೋರ್ಟ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

Read More
Next Story