ರಾಮನಗರ | ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕೆಂಪೇಗೌಡ ಸಮಾಧಿ ಅಭಿವೃದ್ಧಿಗೆ ಮತ್ತೆ ಚಾಲನೆ?
ನಾಡಪ್ರಭು ಕೆಂಪೇಗೌಡರ ಇತಿಹಾಸ ಮತ್ತು ಪರಂಪರೆಯನ್ನು ಸಾರುವ ರಾಮನಗರ ಜಿಲ್ಲೆಯಲ್ಲಿರುವ ಅವರ ಸಮಾಧಿ ಸ್ಥಳದ ಅಭಿವೃದ್ಧಿಗೆ ಮತ್ತೆ ಮಹತ್ವ ಸಿಕ್ಕಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕೆಂಪೇಗೌಡ ಸಮಾಧಿ ಅಭಿವೃದ್ಧಿ ಕಾಮಗಾರಿಯ ಕುರಿತು ಪರಿಶೀಲನೆ ನಡೆಸಲು ನಗರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ನಾಡಪ್ರಭು ಕೆಂಪೇಗೌಡರ ಇತಿಹಾಸ ಮತ್ತು ಪರಂಪರೆಯನ್ನು ಸಾರುವ ರಾಮನಗರ ಜಿಲ್ಲೆಯಲ್ಲಿರುವ ಅವರ ಸಮಾಧಿ ಸ್ಥಳದ ಅಭಿವೃದ್ಧಿಗೆ ಮತ್ತೆ ಮಹತ್ವ ಸಿಕ್ಕಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕೆಂಪೇಗೌಡ ಸಮಾಧಿ ಅಭಿವೃದ್ಧಿ ಕಾಮಗಾರಿಯ ಕುರಿತು ಪರಿಶೀಲನೆ ನಡೆಸಲು ನಗರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸಮಾಧಿ ಸ್ಥಳದ ಪ್ರಸ್ತುತ ಸ್ಥಿತಿಗತಿ, ಅಭಿವೃದ್ಧಿಯ ಅಗತ್ಯತೆಗಳು ಹಾಗೂ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದ್ದಾರೆ. ಕೆಂಪೇಗೌಡರ ಐತಿಹಾಸಿಕ ಸ್ಮಾರಕವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಹಲವು ವರ್ಷಗಳ ಬೇಡಿಕೆಗೆ ಈ ಬಾರಿ ಮುಕ್ತಿ ಸಿಗುತ್ತದೆಯೇ? ಸಮಾಧಿ ಸ್ಥಳದ ಅಭಿವೃದ್ಧಿಗೆ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬ ಕುತೂಹಲ ಮೂಡಿದೆ.
Next Story
