ರಾಮಾಯಣ ಸಿನಿಮಾ ವಿಡಿಯೋ ಲೀಕ್ ಮಾಡಿದ್ರೆ ಹುಷಾರ್, ಚಿತ್ರತಂಡದ ಎಚ್ಚರಿಕೆ
ರಣಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಯಶ್ ನಟನೆಯ ರಾಮಾಯಣ ಚಿತ್ರ ಪೈರಸಿ ವಿರುದ್ಧ ಸಮರ ಸಾರಿದೆ. ಚಿತ್ರಮಂದಿರಗಳಲ್ಲಿ ವಿಡಿಯೋ ಚಿತ್ರೀಕರಿಸಿ ಹಂಚುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.
ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ಯಶ್ ಅಭಿನಯದ ಬಹುನಿರೀಕ್ಷಿತ 'ರಾಮಾಯಣ' ಚಿತ್ರತಂಡ ಪೈರಸಿ ವಿರುದ್ಧ ಸಮರ ಸಾರಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನವಾಗುವಾಗ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ನಿರ್ಮಾಪಕರು ಖಡಕ್ ಎಚ್ಚರಿಕೆ ನೀಡಿದ್ದಾರೆ.
Next Story
