x

56 ಕಾಡಾನೆಗಳ ಸ್ಥಳಾಂತರಕ್ಕೆ ಬ್ರೇಕ್.. ಚಿಕ್ಕಮಗಳೂರು ಶಾಸಕರಿಂದ ತೀವ್ರ ವಿರೋಧ

ಭದ್ರಾ ಅರಣ್ಯದಲ್ಲಿ ಈಗಾಗಲೇ ನೂರಾರು ಆನೆಗಳಿದ್ದು, ಮತ್ತಷ್ಟು ಆನೆಗಳನ್ನು ಸ್ಥಳಾಂತರಿಸಿದರೆ ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಾಗಬಹುದು ಎಂಬ ಆತಂಕ ಶಾಸಕರದ್ದು.


Click the Play button to hear this message in audio format

ಹಾಸನ ಜಿಲ್ಲೆಯ ಬೇಲೂರು ಮತ್ತು ಸಕಲೇಶಪುರ ಭಾಗದಲ್ಲಿರುವ 56 ಕಾಡಾನೆಗಳನ್ನು ಚಿಕ್ಕಮಗಳೂರಿನ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಸರ್ಕಾರದ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಭದ್ರಾ ಅರಣ್ಯದಲ್ಲಿ ಈಗಾಗಲೇ ನೂರಾರು ಆನೆಗಳಿದ್ದು, ಮತ್ತಷ್ಟು ಆನೆಗಳನ್ನು ಸ್ಥಳಾಂತರಿಸಿದರೆ ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಾಗಬಹುದು ಎಂಬ ಆತಂಕ ಶಾಸಕರದ್ದು. ಈ ವಿಚಾರವಾಗಿ ಚಿಕ್ಕಮಗಳೂರು ಭಾಗದ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಹೆಚ್ಚುತ್ತಿರುವ ವಿರೋಧದ ಹಿನ್ನೆಲೆಯಲ್ಲಿ ಸದ್ಯ ಆನೆಗಳ ಸ್ಥಳಾಂತರ ಕಾರ್ಯಾಚರಣೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ನವೆಂಬರ್ 30ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

Read More
Next Story