x

ಕಾವೇರಿ ಸರ್ವಪಕ್ಷ ಸಭೆಗೆ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗಮನ

ಕಾವೇರಿ ನೀರು ವಿವಾದದ ಕುರಿತು ಬೆಂಗಳೂರಿನ ಸರ್ವಪಕ್ಷ ಸಭೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗಮಿಸಿದರು. ರಾಜ್ಯದ ಹಿತಾಸಕ್ತಿ ಹಾಗೂ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಯಿತು.


Click the Play button to hear this message in audio format

ಕಾವೇರಿ ನೀರು ವಿವಾದದ ಕುರಿತು ಬೆಂಗಳೂರಿನ ಸಿಎಂ ಗೃಹ ಕಚೇರಿ 'ಕೃಷ್ಣಾ'ದಲ್ಲಿ ನಡೆದ ಮಹತ್ವದ ಸರ್ವಪಕ್ಷ ಸಭೆಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆಗಮಿಸಿದರು. ರಾಜ್ಯದ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದಾರೆ. ಕಾವೇರಿ ನೀರಿನ ಹಂಚಿಕೆ, ಮುಂದಿನ ಕಾನೂನು ಹೋರಾಟ ಹಾಗೂ ರಾಜ್ಯದ ಒಗ್ಗಟ್ಟಿನ ನಿಲುವಿನ ಕುರಿತು ಚರ್ಚೆ ನಡೆಯುತ್ತಿರುವ ಈ ಸಭೆಗೆ ಶೋಭಾ ಕರಂದ್ಲಾಜೆ ಆಗಮಿಸಿದ ವಿಶೇಷ ದೃಶ್ಯಗಳನ್ನು ಈ ವಿಡಿಯೊದಲ್ಲಿ ನೋಡಿ.

Read More
Next Story