Bengaluru Airport gets more wings; Target to handle 8 crore passengers by 2029
x

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತಷ್ಟು 'ರೆಕ್ಕೆ'; 2029ರ ವೇಳೆಗೆ 8 ಕೋಟಿ ಪ್ರಯಾಣಿಕರ ನಿರ್ವಹಣೆ ಗುರಿ

ಪ್ರಸ್ತುತ ಇರುವ ಸಾಮರ್ಥ್ಯಕ್ಕೆ ಹೆಚ್ಚುವರಿಯಾಗಿ 3 ಕೋಟಿ (30 ಮಿಲಿಯನ್) ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಸೇರಿಸುವ ಗುರಿಯನ್ನು ವಿಮಾನ ನಿಲ್ದಾಣ ಆಡಳಿತ ಮಂಡಳಿ ಹಾಕಿಕೊಂಡಿದೆ.


Click the Play button to hear this message in audio format

ಭಾರತದ ಅತೀ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಒಂದಾಗಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತೊಂದು ಬೃಹತ್ ವಿಸ್ತರಣೆಗೆ ಸಜ್ಜಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಅಂದರೆ 2029ರ ವೇಳೆಗೆ ಟರ್ಮಿನಲ್ 1 ಮತ್ತು ಟರ್ಮಿನಲ್ 2 ಅನ್ನು ವಿಸ್ತರಿಸುವ ಮೂಲಕ ವಾರ್ಷಿಕ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು 8 ಕೋಟಿಗೆ (80 ಮಿಲಿಯನ್) ಹೆಚ್ಚಿಸಲು ನಿರ್ಧರಿಸಲಾಗಿದೆ.

ಪ್ರಸ್ತುತ ಇರುವ ಸಾಮರ್ಥ್ಯಕ್ಕೆ ಹೆಚ್ಚುವರಿಯಾಗಿ 3 ಕೋಟಿ (30 ಮಿಲಿಯನ್) ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಸೇರಿಸುವ ಗುರಿಯನ್ನು ವಿಮಾನ ನಿಲ್ದಾಣ ಆಡಳಿತ ಮಂಡಳಿ ಹಾಕಿಕೊಂಡಿದೆ. ಇದು ಕರ್ನಾಟಕದ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ದೊಡ್ಡ ಮಟ್ಟದ ಉತ್ತೇಜನ ನೀಡಲಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಮುಂಬೈಯನ್ನು ಹಿಂದಿಕ್ಕಿದ ಬೆಂಗಳೂರು

ವಿಮಾನಗಳ ಹಾರಾಟದ ಸಂಖ್ಯೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣವು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೇ ಹಿಂದಿಕ್ಕಿ ಐತಿಹಾಸಿಕ ಸಾಧನೆ ಮಾಡಿದೆ. ಜನವರಿ 2026ರ ಅಂಕಿಅಂಶಗಳ ಪ್ರಕಾರ, ಬೆಂಗಳೂರಿನಲ್ಲಿ 20,819 ದೇಶೀಯ ವಿಮಾನಗಳ ಹಾರಾಟ ನಡೆದಿದ್ದರೆ, ಮುಂಬೈನಲ್ಲಿ 20,540 ಹಾರಾಟ ದಾಖಲಾಗಿದೆ. ಇದು ಬೆಂಗಳೂರು ದೇಶದ ಪ್ರಮುಖ ವಾಯುಯಾನ ಕೇಂದ್ರವಾಗಿ ಬೆಳೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ.

ಆದರೆ, ಒಟ್ಟು ಪ್ರಯಾಣಿಕರ ಸಂಖ್ಯೆಯಲ್ಲಿ ಮುಂಬೈ ಇನ್ನೂ ಮುಂಚೂಣಿಯಲ್ಲಿದೆ. 2025ರ ಸಾಲಿನಲ್ಲಿ ಮುಂಬೈ ವಿಮಾನ ನಿಲ್ದಾಣ 5.55 ಕೋಟಿ ಪ್ರಯಾಣಿಕರನ್ನು ನಿರ್ವಹಿಸಿದ್ದರೆ, ಬೆಂಗಳೂರು ವಿಮಾನ ನಿಲ್ದಾಣ 4.38 ಕೋಟಿ ಪ್ರಯಾಣಿಕರನ್ನು ನಿರ್ವಹಿಸಿದೆ.

ತಂತ್ರಜ್ಞಾನ ವಲಯದ ಕೊಡುಗೆ

ಬೆಂಗಳೂರಿನ ಟೆಕ್ ವಲಯದ ಬೆಳವಣಿಗೆಯೇ ವಿಮಾನಯಾನ ಬೇಡಿಕೆ ಹೆಚ್ಚಲು ಪ್ರಮುಖ ಕಾರಣವಾಗಿದೆ. 2025ರಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 8ರಷ್ಟು ಏರಿಕೆ ಕಂಡುಬಂದಿದೆ. ಸಾಂಕ್ರಾಮಿಕ ರೋಗದ ನಂತರದ ಚೇತರಿಕೆಯಲ್ಲಿ ಬೆಂಗಳೂರು ಪ್ರಮುಖ ಪಾತ್ರ ವಹಿಸುತ್ತಿದ್ದು, ಈಗ ಕೈಗೊಂಡಿರುವ ವಿಸ್ತರಣಾ ಯೋಜನೆಯು ಭವಿಷ್ಯದ ಬೃಹತ್ ಬೇಡಿಕೆಯನ್ನು ಪೂರೈಸಲು ಸಹಕಾರಿಯಾಗಲಿದೆ.

Read More
Next Story