
ಇಂದು ಡಿ.ಕೆ. ಶಿವಕುಮಾರ್ ಜೊತೆ ಕಬ್ಬು ಬೆಳೆಗಾರರ ಸಭೆ ನಡೆಯಲಿದೆ.
ಕಬ್ಬು ಬೆಳೆಗಾರರ ಹೋರಾಟಕ್ಕೆ ಇಂದು ಸಿಗುವುದೇ ಪರಿಹಾರ?
ಬೆಳಗಾವಿ ಮಾತ್ರವಲ್ಲದೆ ಹಾವೇರಿ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರಿದಿದೆ. ರೈತರ ಬೇಡಿಕೆ ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚುತ್ತಿದೆ.
ಟನ್ ಕಬ್ಬಿಗೆ 5,500 ರೂಪಾಯಿ ನೀಡಬೇಕು ಎಂಬ ರೈತರ ಬೇಡಿಕೆಗೆ ಸರ್ಕಾರ ಇನ್ನೂ ಒಪ್ಪಿಗೆ ಸೂಚಿಸಿಲ್ಲ. ಬೆಳಗಾವಿಯಲ್ಲಿ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪಾದಯಾತ್ರೆ, ಹೆದ್ದಾರಿ ಬಂದ್, ಕರ್ನಾಟಕ ಬಂದ್ ಹಾಗೂ ಜೈಲ್ ಭರೋ ಚಳವಳಿ ನಡೆಸಿದರೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ.ಇದರ ಬೆನ್ನಲ್ಲೇ ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಕಬ್ಬು ಬೆಳೆಗಾರರ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.
ಮಂಗಳವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಿಗದಿಯಾಗಿತ್ತು. ಆದರೆ ಗಂಟೆಗಟ್ಟಲೆ ಕಾದರೂ ಸಭೆ ಆರಂಭವಾಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ಕಚೇರಿಯೊಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ತೀವ್ರ ವಾಗ್ವಾದ ನಡೆಯಿತು.
ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆದರೂ ಯಾವುದೇ ಅಂತಿಮ ನಿರ್ಧಾರ ಹೊರಬೀಳಲಿಲ್ಲ. ಸರ್ಕಾರ ಟನ್ ಕಬ್ಬಿಗೆ 1,000 ರೂಪಾಯಿ ಪ್ರೋತ್ಸಾಹಧನ ನೀಡುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ರೈತ ಮುಖಂಡ ಚೂನಪ್ಪ ಪೂಜಾರಿ ಎಚ್ಚರಿಸಿದ್ದಾರೆ.
ಹಲವು ಜಿಲ್ಲೆಗಳಲ್ಲಿ ಮುಂದುವರಿದ ಪ್ರತಿಭಟನೆ
ಬೆಳಗಾವಿ ಮಾತ್ರವಲ್ಲದೆ ಹಾವೇರಿ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರಿದಿದೆ. ರೈತರ ಬೇಡಿಕೆ ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚುತ್ತಿದೆ. ಇಂದು ನಡೆಯಲಿರುವ ಸಭೆಯಲ್ಲಿ ಕಬ್ಬಿನ ದರದ ಕುರಿತು ಅಂತಿಮ ನಿರ್ಧಾರ ಹೊರಬೀಳುತ್ತಾ ಎಂಬ ಕುತೂಹಲ ಮೂಡಿದೆ.
