Renukaswamy case: Prosecution suffers setback, High Court grants relief to five!
x

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೊಂದು ಕಾನೂನು ಹಿನ್ನಡೆಯಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಪತ್ನಿಯ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಪ್ರದೂಷ್‌ಗೆ ಮಾಫಿ ಸಾಕ್ಷಿ ಸ್ಥಾನಮಾನ ನೀಡುವ ವಿಚಾರದಲ್ಲಿ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್‌ ಕೈಗೊಂಡಿರುವ ನಿರ್ಧಾರದಲ್ಲಿ ಕಾನೂನುಬಾಹಿರತೆ ಕಂಡುಬಂದಿಲ್ಲ ಎಂದು ಹೇಳಿದೆ.


Click the Play button to hear this message in audio format

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೊಂದು ಕಾನೂನು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆರೋಪಿ ಪ್ರದೂಷ್‌ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿದ್ದರು. ಈ ನಿರ್ಧಾರವನ್ನು ಪ್ರಶ್ನಿಸಿದ್ದ ವಿಜಯಲಕ್ಷ್ಮಿ, ಮಾಫಿ ಸಾಕ್ಷಿ ಸ್ಥಾನಮಾನ ನೀಡುವ ಪ್ರಕ್ರಿಯೆಯಲ್ಲಿ ಕಾನೂನು ನಿಯಮಗಳನ್ನು ಸರಿಯಾಗಿ ಪಾಲಿಸಲಾಗಿಲ್ಲ ಎಂದು ವಾದಿಸಿದ್ದರು. ಪ್ರದೂಷ್‌ಗೆ ಮಾಫಿ ಸಾಕ್ಷಿ ಸ್ಥಾನಮಾನ ನೀಡುವ ವೇಳೆ ಸಹ-ಆರೋಪಿಗಳಿಗೆ ಅಗತ್ಯ ಮಾಹಿತಿ ನೀಡಿಲ್ಲ ಹಾಗೂ ಸಿಆರ್‌ಪಿಸಿ ಸೆಕ್ಷನ್‌ 164ರ ಅಡಿಯಲ್ಲಿ ನಿಗದಿತ ಪ್ರಕ್ರಿಯೆಯನ್ನು ಅನುಸರಿಸಲಾಗಿಲ್ಲ ಎಂಬುದು ಅವರ ಪ್ರಮುಖ ಆಕ್ಷೇಪವಾಗಿತ್ತು.

ಹೈಕೋರ್ಟ್‌ ಬಳಿಕ ಸುಪ್ರೀಂ ಕೋರ್ಟ್‌ ಮೊರೆ

ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ಅವರು ಮೊದಲಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್‌ ಅವರ ಮನವಿಯನ್ನು ತಿರಸ್ಕರಿಸಿತ್ತು. ಇದಾದ ಬಳಿಕ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ಬಳಿಕ ಅರ್ಜಿ ತಿರಸ್ಕಾರ

ವಿಜಯಲಕ್ಷ್ಮಿ ಅವರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಪ್ರಕರಣದ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್‌ ತೆಗೆದುಕೊಂಡಿರುವ ನಿರ್ಧಾರದಲ್ಲಿ ಕಾನೂನುಬಾಹಿರ ಅಂಶ ಕಂಡುಬಂದಿಲ್ಲ ಎಂದು ಹೇಳಿದೆ. ಮಾಫಿ ಸಾಕ್ಷಿಯಾಗಿ ಪ್ರದೂಷ್‌ನನ್ನು ಪರಿಗಣಿಸಿರುವ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೂಷ್‌ ಮಾಫಿ ಸಾಕ್ಷಿಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಕಾನೂನು ಹೋರಾಟಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.

Read More
Next Story