ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನ ಏರಿಕೆ: ಪ್ರತಿನಿತ್ಯ ಸರಾಸರಿ 1 ಡಿಗ್ರಿ ಉಷ್ಣಾಂಶ ಹೆಚ್ಚಳ
x

ಬೇಸಿಗೆ ನಿಧಾನವಾಗಿ ಆರಂಭಗೊಂಡಿದ್ದು, ರಾಜ್ಯದ ಜನತೆಗೆ ಬಿಸಿಲಿನ ಝಳ ತಟ್ಟಲಾರಂಭಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನದಲ್ಲಿ ಹಠಾತ್ ಏರಿಕೆ ಕಂಡುಬರುತ್ತಿದೆ.  

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನ ಏರಿಕೆ: ಪ್ರತಿನಿತ್ಯ ಸರಾಸರಿ 1 ಡಿಗ್ರಿ ಉಷ್ಣಾಂಶ ಹೆಚ್ಚಳ

ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ಪ್ರಖರತೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿಸಿಲ ನಾಡು ಕಲಬುರಗಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬೇಸಿಗೆಗೂ ಮುನ್ನವೇ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ತಲುಪಿದೆ.


Click the Play button to hear this message in audio format

ಬೇಸಿಗೆ ನಿಧಾನವಾಗಿ ಆರಂಭಗೊಂಡಿದ್ದು, ರಾಜ್ಯದ ಜನತೆಗೆ ಬಿಸಿಲಿನ ಝಳ ತಟ್ಟಲಾರಂಭಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ತಾಪಮಾನದಲ್ಲಿ ಹಠಾತ್ ಏರಿಕೆ ಕಂಡುಬರುತ್ತಿದ್ದು, ಪ್ರತಿನಿತ್ಯ ಸರಾಸರಿ ಒಂದು ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಹೆಚ್ಚಳವಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ರಾಜ್ಯ ರಾಜಧಾನಿಯಲ್ಲಿ ಹಗಲು ಮತ್ತು ರಾತ್ರಿಯ ಉಷ್ಣಾಂಶದಲ್ಲಿ ಗಣನೀಯ ಬದಲಾವಣೆಗಳಾಗುತ್ತಿವೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಎರಡರಲ್ಲೂ ಏರಿಕೆ ಕಂಡುಬಂದಿದ್ದು, ಬೆಂಗಳೂರಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 19.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂಜಾನೆ ಕೊಂಚ ತಂಪಾದ ವಾತಾವರಣವಿದ್ದರೂ, ಬೆಳಗಾಗುತ್ತಿದ್ದಂತೆ ಬಿಸಿಲಿನ ತಾಪ ದಿನೇದಿನೇ ಏರಿಕೆಯಾಗುತ್ತಿರುವುದು ನಗರದ ಜನತೆಯನ್ನು ಹೈರಾಣಾಗಿಸಿದೆ.

ಉತ್ತರ ಕರ್ನಾಟಕದಲ್ಲಿ ತೀವ್ರಗೊಂಡ ಬಿಸಿಲ ಬೇಗೆ

ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ಪ್ರಖರತೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿಸಿಲ ನಾಡು ಕಲಬುರಗಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಬೇಸಿಗೆಗೂ ಮುನ್ನವೇ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇದರ ಜೊತೆಗೆ ತುಮಕೂರು, ಚಿತ್ರದುರ್ಗ, ಕಾರವಾರ, ರಾಯಚೂರು ಹಾಗೂ ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 34 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಮಧ್ಯಾಹ್ನದ ವೇಳೆ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಹ ವಾತಾವರಣ ನಿರ್ಮಾಣವಾಗಿದೆ.

ಮತ್ತಷ್ಟು ತಾಪಮಾನ ಏರಿಕೆಯ ಮುನ್ಸೂಚನೆ

ಮುಂದಿನ ದಿನಗಳಲ್ಲಿ ಬಿಸಿಲಿನ ಬೇಗೆ ಮತ್ತಷ್ಟು ಬಿಗಡಾಯಿಸುವ ಲಕ್ಷಣಗಳೇ ಗೋಚರಿಸುತ್ತಿವೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ತಾಪಮಾನದಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಬ್ರವರಿ ಅಂತ್ಯದಲ್ಲೇ ಬಿಸಿಲಿನ ಪ್ರಖರತೆ ಈ ಮಟ್ಟಿಗೆ ಏರಿಕೆಯಾಗುತ್ತಿರುವುದರಿಂದ, ಮುಂಬರುವ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಉಷ್ಣಾಂಶ ಮತ್ತಷ್ಟು ಕಠಿಣವಾಗುವ ಆತಂಕವನ್ನು ಹವಾಮಾನ ತಜ್ಞರು ವ್ಯಕ್ತಪಡಿಸಿದ್ದಾರೆ.

Read More
Next Story