ಬಳ್ಳಾರಿ-ಹೊಸಪೇಟೆ ನಡುವೆ ರೈಲು ಯೋಜನೆಗೆ ಕೇಂದ್ರ ಅನುಮೋದನೆ
x

ಬಳ್ಳಾರಿ-ಹೊಸಪೇಟೆ ನಡುವೆ ರೈಲು ಯೋಜನೆಗೆ ಕೇಂದ್ರ ಅನುಮೋದನೆ

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಪರ್ಕ ಸೌಲಭ್ಯವನ್ನು ಹೆಚ್ಚಿಸುವ ಮೂಲಕ ಈ ಯೋಜನೆಯು ಪ್ರಯಾಣಿಕರ ಸೇವೆಗಳನ್ನು ಹೆಚ್ಚು ಸಕ್ರಿಯಗೊಳಿಸುತ್ತದೆ.


ಕರ್ನಾಟಕದ ವಿವಿಧ ಪ್ರವಾಸಿ ಸ್ಥಳ ಹಾಗೂ ಇತರೆ ರಾಜ್ಯಗಳ ಧಾರ್ಮಿಕ ಸ್ಥಳಗಳಿಗೆ ಸಂಪರ್ಕಿಸುವ ಸೇರಿ ಒಟ್ಟು 4 ರಾಜ್ಯಗಳಿಗೆ ಹೊಸ ಮೂರು ರೈಲು ಮಾರ್ಗಗಳ ನಿರ್ಮಾಣ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ರೈಲ್ವೆ ಸಚಿವಾಲಯ ವ್ಯಾಪ್ತಿಯಲ್ಲಿ ಬರೋಬ್ಬರಿ 389 ಕಿಲೋ ಮೀಟರ್ ರೈಲ್ವೆ ಜಾಲ ವಿಸ್ತರಣೆಗೆ ಅನುಮೋದನೆ ನೀಡಲಾಗಿದೆ. ಮೂರು ಯೋಜನೆಗಳ ಒಟ್ಟು ಅಂದಾಜು ಮೊತ್ತ 18,509 ಕೋಟಿ ರೂ.ಗಳಾಗಿದೆ.

4 ರಾಜ್ಯಗಳ 12 ಜಿಲ್ಲೆಗಳಿಗೆ ಲಾಭ

ಕರ್ನಾಟಕ, ಹರಿಯಾಣ, ಮಹಾರಾಷ್ಟ್ರ ಮತ್ತು ದೆಹಲಿ ರಾಜ್ಯಗಳ ವ್ಯಾಪ್ತಿಯ ಈ ಮೂರು ರೈಲು ಯೋಜನೆಗಳಿಂದ 12 ಜಿಲ್ಲೆಗಳಿಗೆ ಅನುಕೂಲ ಆಗಲಿದೆ.

ರೈಲ್ವೆ ಯೋಜನೆಗಳಿಂದ ಉದ್ಯೋಗ ಸೃಷ್ಟಿಯೂ ಆಗಲಿದೆ. ಒಟ್ಟು 389 ಕಿ.ಮೀ.ಗಳಷ್ಟು ರೈಲು ಜಾಲವು ವಿಸ್ತರಣೆ ಆಗಲಿದೆ.

ಕೇಂದ್ರ ಸರ್ಕಾರ ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಿರುವುದಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿನಂದನೆ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ಬಳ್ಳಾರಿ-ಹೊಸಪೇಟೆ ನಡುವಿನ 3ನೇ ಮತ್ತು 4ನೇ ರೈಲು ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದು ಕರ್ನಾಟಕದ ಸರಕು ಸಾಗಣೆ ಮತ್ತು ಜನ ಸಂಚಾರದ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ದೃಢ ನಿರ್ಧಾರವಾಗಿದೆ. ಇದರ ಭಾಗವಾಗಿ 65 ಕಿ.ಮೀ. ಉದ್ದದ ಈ ರೈಲು ಮಾರ್ಗದ ವಿಸ್ತರಣೆಯು ಗಣಿಗಾರಿಕೆ, ಉಕ್ಕು ಉತ್ಪಾದನೆ ಹಾಗೂ ಕೈಗಾರಿಕೆಗಳ ಪೂರಕ ವ್ಯವಸ್ಥೆ ವೃದ್ಧಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ.

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಪರ್ಕ ಸೌಲಭ್ಯವನ್ನು ಹೆಚ್ಚಿಸುವ ಮೂಲಕ ಈ ಯೋಜನೆಯು ಪ್ರಯಾಣಿಕರ ಸೇವೆಗಳನ್ನು ಹೆಚ್ಚು ಸಕ್ರಿಯಗೊಳಿಸುತ್ತದೆ. ಸರಕು ಸಾಗಾಣಿಕೆಯನ್ನು ಇನ್ನಷ್ಟು ಸುಗಮಗೊಳಿಸುತ್ತದೆ ಹಾಗೂ ಐತಿಹಾಸಿಕ, ವಿಶ್ವ ಪಾರಂಪರಿಕ ತಾಣವಾದ ಹಂಪಿ ಮತ್ತು ತುಂಗಭದ್ರಾ ಅಣೆಕಟ್ಟೆಯಂತಹ ಪ್ರಸಿದ್ಧ ತಾಣಗಳಿಗೆ ಪ್ರವಾಸಿಗರ ಭೇಟಿಗೆ ಉತ್ತೇಜನ ನೀಡಲಿದೆ.ಈ ಯೋಜನೆಯ ಅನುಷ್ಠಾನದಿಂದ ವಾರ್ಷಿಕ ₹323 ಕೋಟಿಯಷ್ಟು ಬೃಹತ್ ಮೊತ್ತದ ಸರಕು ಸಾಗಾಣಿಕೆ ವೆಚ್ಚ ಉಳಿತಾಯ ಆಗುತ್ತದೆ ಹಾಗೂ ಇಂಗಾಲದ ಹೊರಸೂಸುವಿಕೆಯಲ್ಲಿ ಗಣನೀಯವಾಗಿ ತಗ್ಗುತ್ತಿದೆ. ಈ ಉಪಕ್ರಮವು ಆರ್ಥಿಕ ಬೆಳವಣಿಗೆ, ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಿದೆ ಎಂದಿದ್ದಾರೆ.

Read More
Next Story