ಸಿಎಎ ಜಾರಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ
x

ಸಿಎಎ ಜಾರಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ


ಕೇಂದ್ರ ಬಿಜೆಪಿ ಸರ್ಕಾರ ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿ ಮಾಡುವುದಾಗಿ ಘೋಷಿಸಿದೆ.

ಬಿಜೆಪಿಯ 2019ರ ಚುನಾವಣಾ ಪ್ರಣಾಳಿಕೆಯ ಪ್ರಮುಖ ಭರವಸೆಯಾಗಿದ್ದ, ವಿವಾದಿತ ಸಿಎಎ ಕಾಯ್ದೆ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ವಲಸೆ ಬಂದಿರುವ ಮುಸ್ಲಿಮೇತರ ಧರ್ಮೀಯರು ಭಾರತದ ಪೌರತ್ವ ಹೊಂದಲು ಮುಕ್ತ ಅವಕಾಶ ಮಾಡಿಕೊಡಲಿದೆ.

ಸಿಎಎ ಕಾಯ್ದೆ ನಾಲ್ಕು ವರ್ಷಗಳ ಹಿಂದೆಯೇ ಸಂಸತ್ತಿನ ಉಭಯ ಸದನಗಳ ಅನುಮೋದನೆಯೊಂದಿಗೆ ರಾಷ್ಟ್ರಪತಿಗಳ ಅಂಕಿತ ಪಡೆದಿತ್ತು. ಅಂದಿನಿಂದಲೂ ಕಾಯ್ದೆಯ ವಿಷಯದಲ್ಲಿ ರಾಷ್ಟ್ರವ್ಯಾಪಿ ವ್ಯಾಪಕ ಹೋರಾಟಗಳು ನಡೆದಿದ್ದವು. ಪ್ರತಿಭಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದರು. ಆ ಹಿನ್ನೆಲೆಯಲ್ಲಿ ಕಾಯ್ದೆ ಜಾರಿ ಕುರಿತ ಅಧಿಸೂಚನೆ ಹೊರಡಿಸದೇ ತಡೆ ಹಿಡಿಯಲಾಗಿತ್ತು.

ದೇಶದ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂಬ ಆತಂಕ ಅಲ್ಪಸಂಖ್ಯಾತ ಸಮುದಾಯವನ್ನು ಕಾಡುತ್ತಿದೆ. ಈಗಾಗಲೇ ಅಸ್ಸಾಂನಲ್ಲಿ ಜಾರಿಯಾಗಿರುವ ಸಿಎಎ ಕಾಯ್ದೆಯಿಂದಾಗಿ ಅಲ್ಲಿನ ಲಕ್ಷಾಂತರ ಮಂದಿ ಭಾರತೀಯ ಪೌರತ್ವವನ್ನು ಕಳೆದುಕೊಂಡಿದ್ದಾರೆ. ಆ ಹಿನ್ನೆಲೆಯಲ್ಲಿ ದೇಶಾದ್ಯಂತ ಕಾಯ್ದೆಯ ಕುರಿತು ಆತಂಕ ಇದೆ.


ಈ ನಡುವೆ, ಲೋಕಸಭಾ ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲಿ ಬಿಜೆಪಿ ಸರ್ಕಾರ, ಸೋಮವಾರ ಸಂಜೆ ದಿಢೀರನೇ ಸಿಎಎ ಜಾರಿಯ ಅಧಿಕೃತ ಅಧಿಸೂಚನೆ ಹೊರಡಿಸಿದೆ.

(ಹೆಚ್ಚಿನ ಮಾಹಿತಿ ನಿರೀಕ್ಷಿಸಿ)

Read More
Next Story