Naxalites encounter : ಪೊಲೀಸ್ ಎನ್‌ಕೌಂಟರ್‌ಗೆ 12 ನಕ್ಸಲರ ಹತ್ಯೆ
Naxalites encounter : ಎನ್‌ಕೌಂಟರ್ ನಡೆದ ಸ್ಥಳದಿಂದ ಹತ್ತಕ್ಕೂ ಹೆಚ್ಚು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ನಕ್ಸಲ್ ವಿರೋಧಿ ಕಾರ್ಯಾಚರಣೆಯ ಎಡಿಜಿ ವಿವೇಕಾನಂದ ಸಿನ್ಹಾ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.
ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಎನ್ ಕೌಂಟರ್‌ನಲ್ಲಿ 12 ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಬಸ್ತಾರ್ ವಿಭಾಗದ ಅರಣ್ಯದಲ್ಲಿ ಮಾವೋವಾದಿಗಳು ಭಾರಿ ಸಾವುನೋವುಗಳನ್ನು ಅನುಭವಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರೊಂದಿಗೆ 2025ರಲ್ಲಿ ಹತ್ಯೆಯಾದ ಸಂಖ್ಯೆ 26ಕ್ಕೆ ಏರಿದೆ.
ಎನ್‌ಕೌಂಟರ್ ನಡೆದ ಸ್ಥಳದಿಂದ ಹತ್ತಕ್ಕೂ ಹೆಚ್ಚು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ನಕ್ಸಲ್ ವಿರೋಧಿ ಕಾರ್ಯಾಚರಣೆಯ ಎಡಿಜಿ ವಿವೇಕಾನಂದ ಸಿನ್ಹಾ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.
ಭದ್ರತಾ ಪಡೆಗಳು ಸ್ಥಳದಿಂದ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಂಡಿದ್ದು, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಎನ್‌ಕೌಂಟರ್ ಮುಗಿದ ನಂತರ ಹೆಚ್ಚಿನ ವಿವರಗಳು ಸಿಕ್ಕಿಲ್ಲ.
ಮೂರು ಜಿಲ್ಲೆಗಳ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) 1,500 ಕ್ಕೂ ಹೆಚ್ಚು ಸಿಬ್ಬಂದಿ, ಸಿಆರ್‌ಪಿಎಫ್‌ನ ಎಲೈಟ್ ಜಂಗಲ್ ವಾರ್ಫೇರ್ ಯುನಿಟ್ ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ನ ಐದು ಬೆಟಾಲಿಯನ್‌ಗಳು ಮತ್ತು ಸಿಆರ್‌ಪಿಎಫ್ (ಕೇಂದ್ರ ಮೀಸಲು ಪೊಲೀಸ್ ಪಡೆ) 229 ಬೆಟಾಲಿಯನ್ ತೆಲಂಗಾಣ ರಾಜ್ಯದ ಗಡಿಯಲ್ಲಿರುವ ದಕ್ಷಿಣ ಬಿಜಾಪುರದಲ್ಲಿ ಬೃಹತ್ ನಕ್ಸಲ್ ವಿರೋಧಿ ಕಾರ್ಯಾಚರಣೆ ಆರಂಭಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಕ್ಷಿಣ ಬಿಜಾಪುರದ ಪೂಜಾರಿ ಕಂಕರ್-ಮುರುಡ್ಬಕಾ ಅರಣ್ಯದಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ಆರಂಭಗೊಂಡಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನವರಿ 12 ರಂದು ಬಿಜಾಪುರದ ಮೆಡ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲರು ಮೃತಪಟ್ಟಿದ್ದರು. , ಬಿಜಾಪುರದ ಕುಟ್ರು ಪ್ರದೇಶದಲ್ಲಿ ಐಇಡಿ ಸ್ಫೋಟದಲ್ಲಿ ಎಂಟು ಜವಾನರು ಮತ್ತು ನಾಗರಿಕ ಚಾಲಕ ಸಾವನ್ನಪ್ಪಿದ್ದಾರೆ.