Vote Chori| ಹರಿಯಾಣದಲ್ಲಿ 25 ಲಕ್ಷ ನಕಲಿ ಮತದಾರರ ಸೇರ್ಪಡೆ; ರಾಹುಲ್‌ ಗಾಂಧಿ ಹೊಸ ಬಾಂಬ್‌
x
ನವದೆಹಲಿಯಲ್ಲಿ ರಾಹುಲ್‌ ಗಾಂಧಿ ಮಾಧ್ಯಮಗೋಷ್ಠಿ ನಡೆಸಿದರು.

Vote Chori| ಹರಿಯಾಣದಲ್ಲಿ 25 ಲಕ್ಷ ನಕಲಿ ಮತದಾರರ ಸೇರ್ಪಡೆ; ರಾಹುಲ್‌ ಗಾಂಧಿ ಹೊಸ ಬಾಂಬ್‌

ನಾನು ಶೇ 100ರಷ್ಟು ಸಾಕ್ಷ್ಯ ಇಟ್ಟುಕೊಂಡೇ ಚುನಾವಣಾ ಆಯೋಗವನ್ನು ಪ್ರಶ್ನಿಸುತ್ತಿದ್ದೇನೆ. ಮುಖ್ಯ ಚುನಾವಣಾ ಆಯುಕ್ತ ಮತ್ತು ಇಬ್ಬರು ಚುನಾವಣಾ ಆಯುಕ್ತರು ಹರಿಯಾಣದಲ್ಲಿ ಬಿಜೆಪಿ ಗೆಲುವಿಗೆ ಪೂರಕವಾಗಿ ಕೆಲಸ ಮಾಡಿದ್ದಾರೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.


ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹರಿಯಾಣ ರಾಜ್ಯದಲ್ಲಿ 25 ಲಕ್ಷ ನಕಲಿ ಮತದಾರರ ಹೆಸರು ಸೇರ್ಪಡೆ ಮೂಲಕ ಚುನಾವಣಾ ಆಯೋಗವು ಬಿಜೆಪಿ ಗೆಲುವಿಗಾಗಿ ಮತಕಳವು ಮಾಡಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದರು.

ನವದೆಹಲಿಯ ಇಂದಿರಾ ಭವನದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿದ ಅವರು, ಹರಿಯಾಣದಲ್ಲಿ ನಡೆದಿರುವ ಮತಕಳವಿನ ಕುರಿತು ದಾಖಲೆಗಳ ಸಮೇತ ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡರು.

ನಾನು ಶೇ 100ರಷ್ಟು ಸಾಕ್ಷ್ಯ ಇಟ್ಟುಕೊಂಡೇ ಚುನಾವಣಾ ಆಯೋಗವನ್ನು ಪ್ರಶ್ನಿಸುತ್ತಿದ್ದೇನೆ. ಮುಖ್ಯ ಚುನಾವಣಾ ಆಯುಕ್ತ ಮತ್ತು ಇಬ್ಬರು ಚುನಾವಣಾ ಆಯುಕ್ತರು ಹರಿಯಾಣದಲ್ಲಿ ಬಿಜೆಪಿ ಗೆಲುವಿಗೆ ಪೂರಕವಾಗಿ ಕೆಲಸ ಮಾಡಿದ್ದಾರೆ. ಮತಗಳ್ಳತನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಪಾಲುದಾರರಾಗಿದ್ದಾರೆ ಎಂದು ಆರೋಪಿಸಿದರು.


‘ಆಪರೇಷನ್ ಸರ್ಕಾರ ಚೋರಿ’ ಎಂಬ ಯೋಜನೆ ಮೂಲಕ ಕಾಂಗ್ರೆಸ್ ಪಕ್ಷದ ಗೆಲುವನ್ನು ಸೋಲಾಗಿ ಪರಿವರ್ತಿಸಲು ಪ್ರಯತ್ನಿಸಲಾಗಿದೆ. ಸಿಇಸಿ ಗ್ಯಾನೇಶ್ ಕುಮಾರ್ ಅವರು ಭಾರತದ ಜನತೆಗೆ ಸುಳ್ಳು ಹೇಳುತ್ತಿದ್ದಾರೆ. ಸೊನ್ನೆ (0) ಮನೆ ಸಂಖ್ಯೆ ಎಂಬ ಅವರ ಹೇಳಿಕೆ ತಪ್ಪು ಎಂದು ದೂರಿದರು.

ಹರಿಯಾಣದ ಮತದಾರರ ಪಟ್ಟಿಯಲ್ಲಿ ಒಟ್ಟು 25,41,144 ನಕಲಿ ಮತದಾರರಿದ್ದಾರೆ. ಅನೇಕ ಸ್ಥಳಗಳಲ್ಲಿ ನಕಲಿ ಹೆಸರು, ಅಮಾನ್ಯ ವಿಳಾಸ ಮತ್ತು ಸಮೂಹ ಮತದಾರರ ಉದಾಹರಣೆಗಳಿವೆ ಎಂದು ಹೇಳಿದರು.

ವೋಟ್‌ ಚೋರಿ ಕುರಿತ ರಾಹುಲ್‌ ಗಾಂಧಿ ಪತ್ರಿಕಾಗೋಷ್ಠಿ ವಿವರಕ್ಕೆ ಇಲ್ಲಿ ಕ್ಲಿಕ್‌ ಮಾಡಿ


Read More
Next Story