Pahalgam Terror Attack| ಪಹಲ್ಗಾಮ್ ಭಯೋತ್ಪಾದಕ ದಾಳಿ, ವಿಮಾನ ನಿಲ್ದಾಣದಲ್ಲಿಯೇ ಮೋದಿಯಿಂದ ಸಭೆ
x

ಪ್ರಧಾನಿ ಮೋದಿ ವಿದೇಶಾಂಗ ಕಾರ್ಯದರ್ಶಿ ಡಾ. ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ವಿ. ಅವರೊಂದಿಗೆ ಸಭೆ ನಡೆಸಿದ್ದಾರೆ.

Pahalgam Terror Attack| ಪಹಲ್ಗಾಮ್ ಭಯೋತ್ಪಾದಕ ದಾಳಿ, ವಿಮಾನ ನಿಲ್ದಾಣದಲ್ಲಿಯೇ ಮೋದಿಯಿಂದ ಸಭೆ

ಸೌದಿ ಅರೇಬಿಯಾಕ್ಕೆ ಹೋಗಿದ್ದ ಪ್ರಧಾನಿ ಮೋದಿ ನಿಗದಿಗಿಂತ ಮೊದಲೇ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಮರಳಿದ್ದು, ಭದ್ರತೆಗಳು ಹಾಗೂ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ.


ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರ ರಾಜಧಾನಿ ನವದೆಹಲಿಯ ವಿಮಾನ ನಿಲ್ದಾಣದಲ್ಲಿಯೇ ಉನ್ನತ ಮಟ್ಟದ ಭದ್ರತಾ ಮಾಹಿತಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ದಾಳಿಯ ಸಂಪೂರ್ಣ ವಿವರಗಳನ್ನು ಪರಿಶೀಲಿಸಿದ್ದು, ಮುಂದಿನ ಕ್ರಮಗಳ ಬಗ್ಗೆ ಪ್ರಧಾನಿಯವರು ಸೂಚನೆಗಳನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋವಲ್, ವಿದೇಶಾಂಗ ಸಚಿವ ಎಸ್. ಜಯಶಂಕರ್ ಮತ್ತು ಇತರ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ಪಹಲ್ಗಾಮ್‌ನ ದಾಳಿಯ ಕುರಿತು ವಿಸ್ತೃತ ವರದಿಯನ್ನು ಪ್ರಧಾನಿಯವರಿಗೆ ಮಂಡಿಸಲಾಯಿತು. ಈ ದಾಳಿಯಿಂದ ಉಂಟಾದ ಭದ್ರತಾ ಕಾಳಜಿಗಳನ್ನು ಚರ್ಚಿಸಿ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಯಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡು ದಿನಗಳ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿ ಮಂಗಳವಾರ ರಾತ್ರಿ ಭಾರತಕ್ಕೆ ವಾಪಸ್ ಆದರು. ನಿಗದಿತ ವೇಳಾಪಟ್ಟಿಯಂತೆ ಮೋದಿ ಬುಧವಾರ ರಾತ್ರಿ ನವದೆಹಲಿಗೆ ಮರಳಬೇಕಿತ್ತು. ಆದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಹಿನ್ನೆಲೆ ಅವರು ಮುಂಚಿತವಾಗಿ ದೇಶಕ್ಕೆ ವಾಪಸ್ ಆಗಿದ್ದಾರೆ.

ಈ ನಡುವೆ, ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಅತ್ಯಂತ ಭೀಕರ ದಾಳಿಯ ನಂತರ ಭದ್ರತಾ ಕ್ರಮಗಳನ್ನು ಮುನ್ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರಕ್ಕೆ ತೆರಳಿದ್ದಾರೆ. ಅವರು ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

Read More
Next Story