
ಕುಪ್ವಾರದಲ್ಲಿ ಗುಂಡಿನ ಚಕಮಕಿ: ಮೂವರು ಸೇನಾ ಸಿಬ್ಬಂದಿಗೆ ಗಾಯ
ಶನಿವಾರ (ಜುಲೈ 27) ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ)ಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಟ್ರೆಹ್ಗಾಮ್ ವಿಭಾಗದ ಕುಮ್ಕಾಡಿ ಪೋಸ್ಟ್ ಬಳಿ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story