ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಯಶಸ್ವಿ ಕಾರ್ಯಾಚರಣೆ: 6 ಉಗ್ರರ ಹತ್ಯೆ
x

ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಯಶಸ್ವಿ ಕಾರ್ಯಾಚರಣೆ: 6 ಉಗ್ರರ ಹತ್ಯೆ

ವಿಕ್ಟರ್ ಫೋರ್ಸ್‌ನ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಮೇಜರ್ ಜನರಲ್ ಧನಂಜಯ್ ಜೋಶಿ ಅವರು ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ.


ಶ್ರೀನಗರ: ಏಪ್ರಿಲ್ 22ರ ಪಹಲ್ಗಾಮ್​ ದಾಳಿಯ ನಂತರ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಗಳನ್ನು ತೀವ್ರಗೊಳಿಸಿರುವ ಭಾರತೀಯ ಭದ್ರತಾ ಪಡೆಗಳು, ಕಳೆದ ಮೂರು ದಿನಗಳಲ್ಲಿ ಕಾಶ್ಮೀರದಲ್ಲಿ ಆರು ಜನ ಉಗ್ರರನ್ನು ಹೊಡೆದುರುಳಿಸಿವೆ.

ವಿಕ್ಟರ್ ಫೋರ್ಸ್‌ನ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಮೇಜರ್ ಜನರಲ್ ಧನಂಜಯ್ ಜೋಶಿ ಅವರು ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದು, ದಕ್ಷಿಣ ಕಾಶ್ಮೀರದಲ್ಲಿ ಎರಡು ಪ್ರತ್ಯೇಕ ಪ್ರಮುಖ ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

"ಸಿಆರ್‌ಪಿಎಫ್, ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ಶೋಪಿಯಾನ್‌ನ ಕೆಲ್ಲಾರ್ ಮತ್ತು ಪುಲ್ವಾಮಾದ ತ್ರಾಲ್‌ನಲ್ಲಿ ಈ ಕಾರ್ಯಾಚರಣೆಗಳನ್ನು ಕೈಗೊಂಡವು. ಒಟ್ಟು ಆರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಭದ್ರತಾ ಪಡೆಗಳ ನಡುವಿನ ಅತ್ಯುತ್ತಮ ಸಮನ್ವಯದಿಂದಾಗಿ ಇದು ಸಾಧ್ಯವಾಯಿತು," ಎಂದು ಮೇಜರ್ ಜನರಲ್ ಜೋಶಿ ಸುದ್ದಿಗಾರರಿಗೆ ತಿಳಿಸಿದರು. ಈ ಕಾರ್ಯಾಚರಣೆಗಳು ಭಯೋತ್ಪಾದನೆ ನಿಗ್ರಹದಲ್ಲಿ ಭದ್ರತಾ ಪಡೆಗಳ ಬದ್ಧತೆಯನ್ನು ಪುನರುಚ್ಚರಿಸಿವೆ.

Read More
Next Story