7 killed in wall collapse at temple in Andhra Pradeshs Simhachalam
x

ದೇಗುಲದ ಬಳಿಕ ಗೋಡೆ ಕುಸಿದ ಪಳೆಯುಳಿಕೆ

ಆಂಧ್ರದ ಸಿಂಹಾಚಲಂ ದೇವಸ್ಥಾನದಲ್ಲಿ ಗೋಡೆ ಕುಸಿತ: 8 ಭಕ್ತರು ಸಾವು, ಹಲವರಿಗೆ ಗಾಯ

ಘಟನೆಯಲ್ಲಿ ಮೂವರು ಮಹಿಳೆಯರು ಮತ್ತು ಐವರು ಪುರುಷರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಭಾರೀ ಮಳೆ ಮತ್ತು ಗೋಡೆ ಶಿಥಿಲಗೊಂಡಿದ್ದೇ ಈ ದುರಂತಕ್ಕೆ ಕಾರಣ ಎಂದು ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ ಹೇಳಿದ್ದಾರೆ.


ಆಂಧ್ರಪ್ರದೇಶದ ವಿಶಾಖಪಟ್ಟಣಂನ ಶ್ರೀ ವರಾಹ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ (ಸಿಂಹಾಚಲಂ ದೇವಸ್ಥಾನ) ಚಂದನೋತ್ಸವದ ಸಂದರ್ಭದಲ್ಲಿ ಗೋಡೆ ಕುಸಿದು ಎಂಟು ಭಕ್ತರು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೆಲವರು ಶಿಥಿಲಗಳಡಿ ಸಿಕ್ಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಬೆಳಗಿನ ಜಾವ 3:30ರ ಸುಮಾರಿಗೆ ಭಾರೀ ಮಳೆಯಿಂದಾಗಿ ದೇವಸ್ಥಾನ ಪ್ರವೇಶಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಜಾಗದ ಬಳಿಕ ಶಾಪಿಂಗ್ ಕಾಂಪ್ಲೆಕ್ಸ್‌ನ ರಿಟೈನಿಂಗ್ ಗೋಡೆ ಕುಸಿದಿದೆ. ಈ ಸಮಯದಲ್ಲಿ ಸಾವಿರಾರು ಭಕ್ತರು ಕ್ಯೂನಲ್ಲಿ ನಿಂತಿದ್ದರು. ಈ ವಾರ್ಷಿಕ ಉತ್ಸವದಲ್ಲಿ ದೇವರ ನಿಜರೂಪದ ದರ್ಶನಕ್ಕಾಗಿ ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು. ಗೋಡೆ ಕುಸಿತದ ಜಾಗದಿಂದ ಆರು ಮೃತದೇಹಗಳು ತೆಗೆಯಲಾಗಿದ್ದು, ಇನ್ನಿಬ್ಬರು ಶಿಥಿಲಗಳಡಿ ಸಿಕ್ಕಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ ಮೂವರು ಮಹಿಳೆಯರು ಮತ್ತು ಐವರು ಪುರುಷರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಭಾರೀ ಮಳೆ ಮತ್ತು ಗೋಡೆ ಶಿಥಿಲಗೊಂಡಿದ್ದೇ ಈ ದುರಂತಕ್ಕೆ ಕಾರಣ ಎಂದು ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ ಹೇಳಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ. ಸ್ಥಳಕ್ಕೆ ಗೃಹ ಸಚಿವರು, ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಂಧ್ರಪ್ರದೇಶ ಸರ್ಕಾರವು ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಮೃತರ ಕುಟುಂಬಗಳಿಗೆ ನೆರವಾಗುವ ಭರವಸೆ ನೀಡಿದೆ.

ಏನಿದು ಚಂದನೋತ್ಸವ?

ಚಂದನೋತ್ಸವವು ಸಿಂಹಾಚಲಂ ದೇವಸ್ಥಾನದ ಪ್ರಮುಖ ಉತ್ಸವವಾಗಿದ್ದು, ಈ ದಿನ ದೇವರನ್ನು ಚಂದನದ ಲೇಪನವಿಲ್ಲದೆ ದರ್ಶನ ಮಾಡಬಹುದು. ಈ ವರ್ಷ 1.5 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿತ್ತು. ಆದರೆ, ಈ ದುರಂತ ಸಂಭವಿಸಿದೆ.

Read More
Next Story