Naxal Attack: ನಕ್ಸಲರಿಂದ ವಾಹನ ಸ್ಫೋಟ; 9 ಯೋಧರ ಸಾವು
x
ನಕ್ಸಲರ ದಾಳಿಯಿಂದ ಛಿದ್ರಗೊಂಡ ವಾಹನ.,

Naxal Attack: ನಕ್ಸಲರಿಂದ ವಾಹನ ಸ್ಫೋಟ; 9 ಯೋಧರ ಸಾವು

Naxal Attack : ಭದ್ರತಾ ಸಿಬ್ಬಂದಿ ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆ ಮುಗಿಸಿ ಹಿಂದಿರುಗುವ ವೇಳೆ ಘಟನೆ ನಡೆದಿದೆ. ಜಿಲ್ಲೆಯ ಬೆದ್ರೆ-ಕುಟ್ರು ರಸ್ತೆಯಲ್ಲಿ ಸ್ಫೋಟ ಸಂಭವಿಸಿದೆ ಎಂದ ಪೊಲೀಸರು ತಿಳಿಸಿದ್ದಾರೆ.


ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಭದ್ರತಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನ ಸ್ಫೋಟಿಸಿದ (Naxal Attack) ಹಿನ್ನೆಲೆಯಲ್ಲಿ 9 ಮಂದಿ ಡಿಆರ್‌ಜಿ ಯೋಧರು ಮೃತಪಟ್ಟಿದ್ದಾರೆ. ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ವಾಹನವನ್ನು ಸ್ಫೋಟಿಸಿದ್ದರು. ಹೀಗಾಗಿ ವಾಹನ ಛಿದ್ರಗೊಂಡಿದೆ. ಹೀಗಾಗಿ ಚಾಲಕ ಸೇರಿದಂತೆ ಎಲ್ಲರೂ ಮೃತಪಟ್ಟಿದ್ದಾರೆ.

ಭದ್ರತಾ ಸಿಬ್ಬಂದಿ ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆ ಮುಗಿಸಿ ಹಿಂದಿರುಗುವ ವೇಳೆ ಘಟನೆ ನಡೆದಿದೆ. ಜಿಲ್ಲೆಯ ಬೆದ್ರೆ-ಕುಟ್ರು ರಸ್ತೆಯಲ್ಲಿ ಸ್ಫೋಟ ಸಂಭವಿಸಿದೆ ಎಂದ ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಮುಖಾಮುಖಿಯಲ್ಲಿ ಐವರು ನಕ್ಸಲರು ಸಾವನ್ನಪ್ಪಿದ ಒಂದು ದಿನದ ನಂತರ ಈ ಘಟನೆ ನಡೆದಿದೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್ಮಾದ್‌ನ ಅರಣ್ಯದಲ್ಲಿ ಶನಿವಾರ ಸಂಜೆ (ಜನವರಿ 4) ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ಪ್ರಾರಂಭಗೊಂಡಿತ್ತು.

ಭದ್ರತಾ ಸಿಬ್ಬಂದಿ ಜನವರಿ 6 ರಂದು ಮಧ್ಯಾಹ್ನ 2.15 ರ ಸುಮಾರಿಗೆ ದಾಂತೇವಾಡ, ನಾರಾಯಣಪುರ ಮತ್ತು ಬಿಜಾಪುರದಲ್ಲಿ ಜಂಟಿ ಕಾರ್ಯಾಚರಣೆ ಮುಗಿಸಿ ಹಿಂದಿರುಗುತ್ತಿದ್ದರು. ಬಿಜಾಪುರ ಜಿಲ್ಲೆಯ ಕುಟ್ರು ಪೊಲೀಸ್ ಠಾಣೆ ಪ್ರದೇಶದ ಅಂಬೇಲಿ ಗ್ರಾಮದ ಬಳಿ ಅಪರಿಚಿತ ಮಾವೋವಾದಿಗಳು ವಾಹನವನ್ನು ಸ್ಫೋಟಿಸಿದರು ಎಂದು ಬಸ್ತಾರ್ ಪೊಲೀಸ್ ಇನ್‌ಸ್ಪೆಕ್ಟರ್‌ ಜನರಲ್ (ಐಜಿಪಿ) ತಿಳಿಸಿದ್ದಾರೆ.

"ಘಟನೆ ಕುರಿತು ವಿವರವಾದ ಹೇಳಿಕೆಯನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡುತ್ತೇವೆ" ಎಂದು ಅಧಿಕಾರಿ ಹೇಳಿದ್ದಾರೆ.

ಛತ್ತೀಸ್‌ಗಢ ವಿಧಾನಸಭಾ ಸ್ಪೀಕರ್ ಮತ್ತು ಮಾಜಿ ಮುಖ್ಯಮಂತ್ರಿ ಡಾ.ರಮಣ್ ಸಿಂಗ್ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿ, " ನಕ್ಸಲರ ವಿರುದ್ಧ ದೊಡ್ಡ ಕಾರ್ಯಾಚರಣೆಗಳನ್ನು ನಡೆಸಿದ ಪ್ರತಿ ಬಾರಿಯೂ ಹೇಡಿತನದ ದಾಳಿಗಳನ್ನು ನಡೆಸುತ್ತಾರೆ. ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಸೈನಿಕರ ಕುಟುಂಬಗಳಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಛತ್ತೀಸ್‌ಗಢ ಸರ್ಕಾರ ಮತ್ತು ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತಿರುವ ಮಹತ್ವದ ಕ್ರಮಗಳು ಮುಂದುವರಿಯುತ್ತವೆ" ಎಂದು ಹೇಳಿದ್ದಾರೆ.

Read More
Next Story