Aarti Sathes appointment as a judge of the Bombay High Court, opposition parties object
x

ಬಾಂಬೆ ಹೈಕೋರ್ಟ್‌

ಬಿಜೆಪಿ ವಕ್ತಾರೆ ಈಗ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿ; ಪ್ರತಿಪಕ್ಷಗಳ ಆಕ್ಷೇಪ

ಇತ್ತೀಚೆಗೆ ನಡೆದ ಸಭೆಯಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ ಅಜಿತ್ ಕಡೇಹಂಕ‌ರ್, ಆರತಿ ಸಾಥೆ ಮತ್ತು ಸುಶೀಲ್ ಘೋಡೇಶ್ವ‌ರ್ ಅವರನ್ನು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಅನುಮೋದಿಸಿತ್ತು.


ಬಿಜೆಪಿ ವಕ್ತಾರೆಯಾಗಿದ್ದ ಆರತಿ ಸಾಠೆ ಅವರನ್ನು ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿರುವ ಸುಪ್ರೀಂಕೋರ್ಟ್‌ ಕೊಲಿಜಿಯಂ ಕ್ರಮಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ವಿವಾದಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಸುಪ್ರೀಂಕೋರ್ಟ್ ಕೊಲಿಜಿಯಂ ಅಜಿತ್ ಕಡೇಹಂಕ‌ರ್, ಆರತಿ ಸಾಠೆ ಮತ್ತು ಸುಶೀಲ್ ಘೋಡೇಶ್ವ‌ರ್ ಅವರನ್ನು ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಿತ್ತು. ನ್ಯಾಯಮೂರ್ತಿಯಾಗಿ ನೇಮಕವಾಗಿರುವ ಆರತಿ ಸಾಠೆ ಅವರು ಈ ಹಿಂದೆ ಮಹಾರಾಷ್ಟ್ರ ಬಿಜೆಪಿ ವಕ್ತಾರರಾಗಿದ್ದರು. ಹಾಗಾಗಿ ಅವರನ್ನು ನ್ಯಾಯಮೂರ್ತಿ ಹುದ್ದೆಯಿಂದ ಬಿಡುಗಡೆ ಮಾಡಬೇಕು. ಆ ಮೂಲಕ ನ್ಯಾಯ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕು ಎಂದು ಒತ್ತಾಯಿಸಿವೆ.

'ರಾಜಕೀಯವಾಗಿ ಸಂಬಂಧ ಹೊಂದಿದ ವ್ಯಕ್ತಿಗಳನ್ನು ನೇರವಾಗಿ ನ್ಯಾಯಮೂರ್ತಿ ಸ್ಥಾನದಲ್ಲಿ ಕೂರಿಸಿರುವುದು ನ್ಯಾಯಾಂಗದಲ್ಲಿ ರಾಜಕೀಯಕ್ಕೆ ಆಸ್ಪದ ನೀಡಿದಂತಾಗುತ್ತದೆ. ಇಂತಹ ನೇಮಕಾತಿಗಳು ನ್ಯಾಯಾಂಗ ವ್ಯವಸ್ಥೆಯ ನಿಷ್ಪಕ್ಷಪಾತ ಕಾರ್ಯನಿರ್ವಹಣೆಯ ಮೇಲೆ ದೂರಗಾಮಿ ಪರಿಣಾಮ ಬೀರಲಿವೆʼ ಎಂದು ಎನ್‌ಸಿಪಿ ಶಾಸಕ ರೋಹಿತ್ ಪವಾರ್‌ ಆಕ್ರೋಶ ಹೊರಹಾಕಿದ್ದಾರೆ.

Read More
Next Story