ಪಶ್ಚಿಮ ಬಂಗಾಳದ ಆಸ್ಪತ್ರೆಯಲ್ಲಿ ವೈದ್ಯೆಗೆ ಬೆದರಿಕೆ
x
ಉತ್ತರ ಬಂಗಾಳದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೊರಗೆ ಕಿರಿಯ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪಶ್ಚಿಮ ಬಂಗಾಳದ ಆಸ್ಪತ್ರೆಯಲ್ಲಿ ವೈದ್ಯೆಗೆ ಬೆದರಿಕೆ

ಪರ್ಬಾ ಬರ್ಧಮಾನ್‌ನ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ದಾದಿಯರು ರೋಗಿಯ ದುರ್ವರ್ತನೆ ವಿರುದ್ಧ ಪ್ರತಿಭಟಿಸಿದರು.


ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯ ಕಾಲೇಜು ಆಸ್ಪತ್ರೆಯಲ್ಲಿ ವೈದ್ಯೆಯ ಅಮಾನುಷ ಅತ್ಯಾಚಾರ-ಕೊಲೆಯನ್ನು ಪ್ರತಿಭಟಿಸಿ, ದೇಶಾದ್ಯಂತ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ಚಿಕಿತ್ಸೆ ವಿಳಂಬವಾದರೆ ಅಂಥದ್ಧೇ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ವೈದ್ಯೆಗೆ ರೋಗಿಯೊಬ್ಬರು ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಪರ್ಬಾ ಬರ್ಧಮಾನ್‌ನ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ದಾದಿಯರು ಶನಿವಾರ ರೋಗಿಯ ದುರ್ವರ್ತನೆ ವಿರುದ್ಧ ಪ್ರತಿಭಟಿಸಿದರು. ವ್ಯಕ್ತಿ ಮದ್ಯದ ಅಮಲಿನಲ್ಲಿ ಭಟಾರ್ ಜನರಲ್ ಆಸ್ಪತ್ರೆಯ ತುರ್ತು ವಿಭಾಗಕ್ಕೆ ಪ್ರವೇಶಿಸಿ, ಕರ್ ಆಸ್ಪತ್ರೆಯಲ್ಲಿ ವೈದ್ಯೆ ಅನುಭವಿಸಿದ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿದರು. ಸುಶಾಂತ ರಾಯ್ ಎಂಬುವನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವೈದ್ಯೆ ಚಿಕಿತ್ಸೆ ನಿಲ್ಲಿಸಲಿಲ್ಲ: ಪುರ್ಬಾ ಬರ್ಧಮಾನ್ ಜಿಲ್ಲಾ ಆರೋಗ್ಯ ಅಧಿಕಾರಿಯೊಬ್ಬರು ಹೇಳಿದರು,ʼ ತನಗೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಕೋಲ್ಕತ್ತಾದ ಆರ್‌.ಜಿ. ಕರ್ ಆಸ್ಪತ್ರೆಯ ವೈದ್ಯೆಗೆ ನೀಡಿದ ಚಿಕಿತ್ಸೆಯನ್ನು ನೀಡಲಾಗುವುದು ಎಂದು ಬೆದರಿಸಿದ. ಹೀಗಿದ್ದರೂ ವೈದ್ಯೆ ಚಿಕಿತ್ಸೆ ನಿಲ್ಲಿಸಲಿಲ್ಲ.ಇತರ ಸಿಬ್ಬಂದಿಗಳೊಂದಿಗೆ ಚರ್ಚಿಸಿ, ಸೋಮವಾರ ಇಂದು ಸಿಎಂಒಎಚ್ ಕಚೇರಿಗೆ ಗುಂಪಾಗಿ ಬಂದು, ಆ ವ್ಯಕ್ತಿಗೆ ಶಿಕ್ಷೆ ಹಾಗೂ ಆರೋಗ್ಯ ಸಿಬ್ಬಂದಿಗೆ ಭದ್ರತೆ ನೀಡುವಂತೆ ಒತ್ತಾಯಿಸಿದರು,ʼ ಎಂದು ತಿಳಿಸಿದರು.

ಆರೋಪಿ ನಾಗರಿಕ ಸ್ವಯಂಸೇವಕನಾಗಿದ್ದು, ಸ್ಥಳೀಯ ಪೊಲೀಸರ ಅಡಿಯಲ್ಲಿ ಕೆಲಸ ಮಾಡುವ ಗುತ್ತಿಗೆ ಸಿಬ್ಬಂದಿ ಎಂದು ಅಧಿಕಾರಿ ಹೇಳಿದರು.

Read More
Next Story