Air India : ಕೈಕೊಟ್ಟ ಎಂಜಿನ್, ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
Air India : ಡೆಲ್ಲಿಗೆ ಹೋಗಲು ಟೇಕ್‌ಆಫ್ ಆಗಿದ್ದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್ ಕೆಲಸ ನಿಲ್ಲಿಸಿದ ಕಾರಣ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಇತ್ತೀಚಿನ ಕೆಲವು ದಿನಗಳಲ್ಲಿ ವಿಮಾನಗಳ ಅವಘಡ ಹೆಚ್ಚಾಗುತ್ತಿದೆ. ಅಂತೆಯೇ ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿಯೂ ಭಾನುವಾರ ಸಂಜೆ ಆತಂಕದ ಪರಿಸ್ಥಿತಿಯೊಂದು ಸೃಷ್ಟಿಯಾಗಿತ್ತು. ಏರ್ ಇಂಡಿಯಾ ವಿಮಾನವೊಂದರ ಎಂಜಿನ್ ಕೈಕೊಟ್ಟ ಕಾರಣ ತುರ್ತು ಭೂಸ್ಪರ್ಶ ಮಾಡಬೇಕಾಯಿತು.
ಡೆಲ್ಲಿಗೆ ಹೋಗಲು ಟೇಕ್‌ಆಫ್ ಆಗಿದ್ದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್ ಕೆಲಸ ನಿಲ್ಲಿಸಿದ ಕಾರಣ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಬೆಂಗಳೂರು ಕೇಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಜೆ 7ಗಂಟೆಗೆ 2820 ವಿಮಾನ ಟೇಕಾಫ್ ಆಗಿತ್ತು. ಆದರೆ ಆಕಾಶಕ್ಕೆ ಏರಿದ ಕೆಲ ನಿಮಿಷಗಳಲ್ಲಿ ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂತು. ಪೈಲೆಟ್‌ಗಳು ತಕ್ಷಣ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅಲ್ಲಿಂದಲೇ ವಿಮಾನವನ್ನು ಬೆಂಗಳೂರಿನ ಸುತ್ತ ತಿರುಗಿಸಿ ಭೂಸ್ಪರ್ಶ ಮಾಡಿಸಲಾಯಿತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಆಗಿರುವ ತಾಂತ್ರಿಕ ಸಮಸ್ಯೆಗಳ ನಮಗೆ ಮಾಹಿತಿ ಲಭ್ಯವಿಲ್ಲ, ಆದರೆ ವಿಮಾನ ತುರ್ತು ಭೂಸ್ಪರ್ಶ ಮಾಡಿತು ಎಂದು ವಿಮಾನಯಾನ ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ . ಯಾವುದೇ ಆಘಾತಕಾರಿ ಘಟನೆ ಸಂಭವಿಸಿಲ್ಲ ಮತ್ತು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅವರು ವಿವರಿಸಿದ್ದಾರೆ.