Maha Kumbh 2025: ಕುಂಭ ಮೇಳದಲ್ಲಿ ಕಾಲ್ತುಳಿತ; ಕರ್ನಾಟಕದ ನಾಲ್ಕು ಮಂದಿ ಸಾವು
Maha Kumbh 2025: ಕರ್ನಾಟಕದಿಂದ ಭಾರೀ ಪ್ರಮಾಣದ ಭಕ್ತರು ಕುಂಭ ಮೇಳಕ್ಕೆ ಹೋಗಿದ್ದರು. ಅವರಲ್ಲಿ ಕೆಲವರು ಮೃತಪಟ್ಟಿದ್ದರೆ. ಇನ್ನೂ ಹಲವು ಭಕ್ತರು ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ(Uttar Pradesh) ಪ್ರಯಾಗರಾಜ್‌ನಲ್ಲಿ(Prayagraj) ಸಂಭವಿಸಿರುವ ಕಾಲ್ತುಳಿತದಲ್ಲಿ ಕರ್ನಾಟಕದ ಒಟ್ಟು ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ (Maha Kumbh 2025) ಮೌನಿ ಅಮಾವಾಸ್ಯೆಯ (Mauni Amavasya) ಹಿನ್ನೆಲೆಯಲ್ಲಿ ಭಾರೀ ಸಂಖ್ಯೆಯ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಕಾಲ್ತುಳಿತ ಸಂಭವಿಸಿದೆ. ಭೀಕರ ದುರಂತರದಲ್ಲಿ 15 ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದರಲ್ಲಿ ಬೆಳಗಾವಿಯ ತಾಯಿ ಮತ್ತು ಮಗಳು ಸೇರಿದ್ದಾರೆ. ಜತೆ ಇನ್ಜೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅದೇ ರೀತಿ ಶಿವಾಜಿನಗರ ಒಬ್ಬರು ಮೃತಪಟ್ಟಿದ್ದಾರೆ ಎಂಬುದಾಗಿ ಮಾಹಿತಿ ಬಂದಿದೆ. ನೂರಾರು ಮಂದಿ ತೀವ್ರವಾಗಿ ಗಾಯಗೊಂಡಿದ್ದುಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತ್ರಿವೇಣಿ ಸಂಗಮದಲ್ಲಿ ಮಧ್ಯರಾತ್ರಿ 2.30ರ ವೇಳೆಗೆ ಮಾತಿನ ಚಕಮಕಿ, ನೂಕಾಟ- ತಳ್ಳಾಟ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳಕ್ಕೆ ರಕ್ಷಣಾ ಪಡೆಗಳು ಧಾವಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ.
'ಎರಡನೇ ಶಾಹಿ ಸ್ನಾನ'ದ ದಿನವಾದ ಮೌನಿ ಅಮಾವಾಸ್ಯೆಯಂದು ಘಾಟ್‌ಗಳು ಮತ್ತು ತ್ರಿವೇಣಿ ಸಂಗಮದಲ್ಲಿ ಮಂಗಳವಾರದಿಂದಲೇ ಭಾರಿ ಸಂಖ್ಯೆ ಜನರು ಜಮಾಯಿಸಿದ್ದರು. ಅವರನ್ನು ನಿರ್ವಹಿಸುವುದು ಅಲ್ಲಿನ ಆಡಳಿತಕ್ಕೆ ಕಷ್ಟವಾಯಿತು. ಬುಧವಾರ ಪವಿತ್ರ ಸ್ನಾನ ಮಾಡಲು ಕುಂಭಮೇಳಕ್ಕೆ ಕನಿಷ್ಠ 10 ಕೋಟಿ ಮಂದಿ ಆಗಮಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಜನರನ್ನು ನಿಯಂತ್ರಣ ಮಾಡಲು ಸಾಧ್ಯವಾಗದೇ ಅಧಿಕಾರಿಗಳು ಅವರೆಲ್ಲರನ್ನೂ ವಾಪಸ್ ಕಳುಹಿಸುತ್ತಿದ್ದಾರೆ.
ಮುರಿದ ತಡೆಗೋಡೆ
ಏಕಾಏಕಿ ಜನರ ಸಂಖ್ಯೆ ಹೆಚ್ಚಾದ ಕಾರಣ ತಳ್ಳಾಟ ಆರಂಭವಾಯಿತು. ಹೀಗಾಗಿ ತಡೆಗೋಡೆ ಮುರಿದ ನಂತರ ಕಾಲ್ತುಳಿತ ಸಂಭವಿಸಿದೆ . "ಸಂಗಮ ಪ್ರದೇಶದಲ್ಲಿ ತಡೆಗೋಡೆ ಮುರಿದ ನಂತರ ಕೆಲವರು ಗಾಯಗೊಂಡರು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು" ಎಂದು ಅವರು ತಿಳಿಸಿದ್ದಾರೆ.
ಮಕರ ಸಂಕ್ರಾಂತಿಯಿಂದ ಕುಂಭಮೇಳ ನಡೆಯುವ ಅಷ್ಟೂ ದಿನ ನೀರಿನಲ್ಲಿ ಮಿಂದೇಳುವುದನ್ನು ‘ಪವಿತ್ರ’ ಎಂದು ಭಾವಿಸಲಾಗುತ್ತದೆ. ಆದರೆ ಅಮೃತ ಸ್ನಾನದ (ಶಾಹಿ ಸ್ನಾನ) ದಿನಗಳನ್ನು ವಿಶೇಷವಾದ ದಿನಗಳೆಂದು ಎಂದು ಪರಿಗಣಿಸಲಾಗುತ್ತದೆ.
Live Updates
- 29 Jan 2025 11:09 AM IST
ಕರ್ನಾಟಕದ ಸರೋಜಿನಿ ಎಂಬ ಮಹಿಳೆಯೂ ದುರಂತದ ಬಗ್ಗೆ ಮಾಹಿತಿ ನೀಡಿದ್ದಾರೆ. “ನಾವು ಕುಟುಂಬದ ಸಮೇತ ಪುಣ್ಯಸ್ನಾನ ಮಾಡಲು ತೆರಳಿದ್ದೆವು. ಇದೇ ವೇಳೆ ನೂಕುನುಗ್ಗಲು ಉಂಟಾಯಿತು. ಜನರ ಗುಂಪಿನಿಂದ ನಾವು ಎಷ್ಟೇ ಪ್ರಯತ್ನ ಮಾಡಿದರೂ ಅಲ್ಲಿಂದ ಹೊರಬರಲು ಆಗಲಿಲ್ಲ. ಅಷ್ಟೊತ್ತಿಗಾಗಲೇ ಕಾಲ ಮಿಂಚಿತ್ತು. ಕಾಲ್ತುಳಿತ ಉಂಟಾಗಿ ಹಲವರು ಮೃತಪಟ್ಟರು” ಎಂದು ತಿಳಿಸಿದ್ದಾರೆ.
- 29 Jan 2025 11:06 AM IST
ಮಹಾಕುಂಭಮೇಳದಲ್ಲಿ ವಿಐಪಿ ಸಂಸ್ಕೃತಿ ವಿರುದ್ಧ ರಾಹುಲ್ ವಾಗ್ದಾಳಿ
ಸಂಗಮದಲ್ಲಿ ಕಾಲ್ತುಳಿತದ ಬಗ್ಗೆ ಕಾಂಗ್ರೆಸ್ ಬುಧವಾರ (ಜನವರಿ 29) ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸಾಮಾನ್ಯ ಭಕ್ತರ ಬದಲು ವಿಐಪಿ ಮೇಲೆ ಆಡಳಿತದ ವಿಶೇಷ ಗಮನ ಮತ್ತು ದುರಾಡಳಿತ ಈ ದುರಂತ ಘಟನೆಗೆ ಕಾರಣವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
"ವಿಐಪಿ ಸಂಸ್ಕೃತಿ" ಯನ್ನು ನಿಯಂತ್ರಿಸಬೇಕು ಮತ್ತು ಪ್ರಯಾಗ್‌ರಾಜ್‌ನ ಮಹಾ ಕುಂಭದಲ್ಲಿ ಸಾಮಾನ್ಯ ಭಕ್ತರ ಅಗತ್ಯಗಳನ್ನು ಪೂರೈಸಲು ಸರ್ಕಾರ ಉತ್ತಮ ವ್ಯವಸ್ಥೆಗಳನ್ನು ಮಾಡಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
- 29 Jan 2025 10:59 AM IST
ಮಹಾ ಕುಂಭ ಮೇಳಕ್ಕೆ ತೆರಳುವ ವಿಶೇಷ ರೈಲುಗಳ ಕಾರ್ಯಾಚರಣೆ ಸ್ಥಗಿತ
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಹಿನ್ನೆಲೆಯಲ್ಲಿ ಜನಜಂಗುಳಿ ನಿಯಂತ್ರಿಸಲು ಹಲವು ವಿಶೇಷ ರೈಲುಗಳನ್ನು ರದ್ದುಗೊಳಿಸಲಾಗಿದೆ. ಜೊತೆಗೆ ರೈಲು ಮಾರ್ಗವನ್ನು ಬದಲಾಯಿಸಲಾಗಿದೆ. ಪಂಡಿತ್ ದೀನದಯಾಳ್ ಉಪಾಧ್ಯಾಯ ಜಂಕ್ಷನ್‌ನಿಂದ ಪ್ರಯಾಗರಾಜ್‌ಗೆ ಹೋಗುವ ಮಹಾಕುಂಭಮೇಳದ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ.
- 29 Jan 2025 10:53 AM IST
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದ ವೇಳೆ ಕಾಲ್ತುಳಿತ ಉಂಟಾಗಿರುವ ಕಾರಣ, ಜನಜಂಗುಳಿ ನಿಯಂತ್ರಿಸಲು ಹಲವು ವಿಶೇಷ ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ ರೈಲು ಮಾರ್ಗವನ್ನು ಬದಲಾಯಿಸಲಾಗಿದೆ. ಪಂಡಿತ್ ದೀನದಯಾಳ್ ಉಪಾಧ್ಯಾಯ ಜಂಕ್ಷನ್‌ನಿಂದ ಪ್ರಯಾಗರಾಜ್‌ಗೆ ಹೋಗುವ ಮಹಾಕುಂಭಮೇಳದ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಪಂಡಿತ್ ದೀನದಯಾಳ್ ಉಪಾಧ್ಯಾಯ ಜಂಕ್ಷನ್‌ನಿಂದ ಪ್ರಯಾಗರಾಜ್‌ಗೆ ಹೋಗುವ ಮಹಾಕುಂಭಮೇಳದ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ.
- 29 Jan 2025 10:51 AM IST
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಮಹಿಳೆಯರು ಹಾಗೂ ಬಾಲಕಿಯರು ಗಾಯಗೊಂಡಿದ್ದಾರೆ. ಮಹಿಳೆಯರು ಬಿಜೆಪಿ ಕಾರ್ಯಕರ್ತೆಯರು ಎಂದು ಮೂಲಗಳು ತಿಳಿಸಿವೆ.
- 29 Jan 2025 10:42 AM IST
ಅರೆಬೆಂದ ವ್ಯವಸ್ಥೆಗಾಗಿ ಕೇಂದ್ರ, ಯೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಸಂಗಮದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿಯ ಬಗ್ಗೆ ಕಾಂಗ್ರೆಸ್ ಬುಧವಾರ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಮಹಾ ಕುಂಭ ನಿರ್ವಹಣೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗಿಂತ ಉತ್ತಮ ಆಡಳಿತಗಾರರಿಗೆ ಹಸ್ತಾಂತರಿಸಬೇಕು ಮತ್ತು ಅಲ್ಲಿ ವಿವಿಐಪಿಗಳ ಓಡಾಟ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಮಹಾಕುಂಭ ಮೇಳದ ಸಂದರ್ಭದಲ್ಲಿ ತೀರ್ಥರಾಜ ಸಂಗಮದ ದಡದಲ್ಲಿ ಕಾಲ್ತುಳಿತದಿಂದಾಗಿ "ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ" ಮತ್ತು ಅನೇಕ ಜನರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಅತ್ಯಂತ ಹೃದಯ ವಿದ್ರಾವಕ ಎಂದು ಹೇಳಿದ್ದಾರೆ. "ಭಕ್ತರ ಕುಟುಂಬಗಳಿಗೆ ನಮ್ಮ ಆಳವಾದ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಬಯಸುತ್ತೇವೆ" ಎಂದು ಅವರು ಹೇಳಿದರು.
- 29 Jan 2025 10:34 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಹಾ ಕುಂಭ್‌ನಲ್ಲಿ ಸಂಭವಿಸಿದ ಕಾಳ್ತುಳಿತ ಘಟನೆ ಬಗ್ಗೆ ಪರಿಶೀಲನೆ ನಡೆಸಿದರು ಮತ್ತು ತಕ್ಷಣದ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.
ಮೋದಿ ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಮತ್ತು ಇದುವರೆಗೆ ಆದಿತ್ಯನಾಥ್ ಜೊತೆ ಎರಡು ಬಾರಿ ಮಾತುಕತೆಯನ್ನು ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
"ಪ್ರಧಾನಮಂತ್ರಿ ಮೋದಿ ಕುಂಭ ಮೆಳಾದ ಪರಿಸ್ಥಿತಿಯ ಕುರಿತು ಯೋಗಿ ಜಿಯವರೊಂದಿಗೆ ಮಾತನಾಡಿ, ಬೆಳವಣಿಗೆಗಳನ್ನು ಪರಿಶೀಲಿಸಿದರು ಮತ್ತು ತಕ್ಷಣದ ಬೆಂಬಲ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು" ಎಂದು ಒಬ್ಬ ಅಧಿಕಾರಿ ಹೇಳಿದರು.
ನಡೆಯುತ್ತಿರುವ ಮಹಾ ಕುಂಭಮೇಳದ ವೇಳೆ, ಮೌನಿ ಅಮಾವಾಸ್ಯೆ ದಿನ ಲಕ್ಷಾಂತರ ಭಕ್ತರು ಪುಣ್ಯ ಸ್ನಾನಕ್ಕಾಗಿ ತಲುಪಿದ ಹಿನ್ನೆಲೆಯಲ್ಲಿ ಬುಧವಾರ (ಜನವರಿ 29) ಮುಂಜಾನೆ ಸಾಂಗಂನಲ್ಲಿ ತುಸು ತುಸು ಪರಿಸ್ಥಿತಿ ಉಂಟಾದ ನಂತರ ಬಹುಮಟ್ಟಿನ ಪ್ರಾಣಹಾನಿ ಸಂಭವಿಸಿದ್ದೇ ಸಾಧ್ಯವೆಂದು ಅಧಿಕಾರಿಗಳು ತಿಳಿಸಿದ್ದಾರೆ.