
Delhi CM| ಆತಿಶಿ ಪ್ರಮಾಣವಚನ 21ಕ್ಕೆ
ನವದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ ಆತಿಶಿ ಮತ್ತು ಅವರ ಸಂಪುಟವು ಸೆಪ್ಟೆಂಬರ್ 21 ರಂದು ಪ್ರಮಾಣವಚನ ಸ್ವೀಕರಿಸಲಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ತಿಳಿಸಿದೆ.
ಈಮೊದಲು ಆತಿಶಿ ಮಾತ್ರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಆನಂತರ ಮಂತ್ರಿಮಂಡಲ ಕೂಡ ಪ್ರಮಾಣ ವಚನ ಸ್ವೀಕರಿಸಬೇಕೆಂದು ನಿರ್ಧರಿಸಲಾಯಿತು.
ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆನಂತರ ಆತಿಶಿ ಅವರು ರಾಷ್ಟ್ರ ರಾಜಧಾನಿಯಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.
Next Story