ATMs well stocked, fully functional, say banks
x

ಸ್ಟೇಟ್​ ಬ್ಯಾಂಕ್​ ಇಂಡಿಯಾ.

ಎಟಿಎಂಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ: ಬ್ಯಾಂಕುಗಳ ಭರವಸೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಎಟಿಎಂಗಳು ಮುಚ್ಚುತ್ತಿವೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ವರದಿಗಳ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲದ ಕಾರಣಕ್ಕೆ ಬ್ಯಾಂಕ್​ಗಳು ಹೇಳಿಕೆ ನೀಡಿವೆ.


ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕುಗಳು ಶುಕ್ರವಾರ ತಮ್ಮ ಎಟಿಎಂಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ. ಸಾಕಷ್ಟು ಹಣ ದಾಸ್ತಾನಿರುತ್ತದೆ ಮತ್ತು ಡಿಜಿಟಲ್ ಸೇವೆಗಳು ಸುಗಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಭರವಸೆ ನೀಡಿದೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಎಟಿಎಂಗಳು ಮುಚ್ಚುತ್ತಿವೆ ಎಂಬ ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವ ವರದಿಗಳ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲದ ಕಾರಣಕ್ಕೆ ಬ್ಯಾಂಕ್​ಗಳು ಭರವಸೆ ನೀಡಿವೆ.

"ನಮ್ಮ ಎಲ್ಲ ಎಟಿಎಂಗಳು, ಸಿಡಿಎಂ/ಎಡಿಡಬ್ಲ್ಯೂಎಂಗಳು ಮತ್ತು ಡಿಜಿಟಲ್ ಸೇವೆಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಬಳಕೆಗೆ ಲಭ್ಯವಿವೆ," ಎಂದು ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ. ದೃಢೀಕರಿಸದ ಮಾಹಿತಿ ನಂಬಬಾರದು ಎಂದು ಸಲಹೆ ನೀಡಿದೆ.

ಬ್ಯಾಂಕ್ ಆಫ್ ಬರೋಡಾ, ಪಂಜಾಬ್ ಆ್ಯಂಡ್​ ಸಿಂಧ್ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಇಂಡಿಯಾವೂ ಇದೇ ರೀತಿಯ ಸಂದೇಶಗಳನ್ನು ಪೋಸ್ಟ್ ಮಾಡಿವೆ.

"ನಮ್ಮ ಎಲ್ಲ ಡಿಜಿಟಲ್ ಸೇವೆಗಳು ಸಹ ಸುಗಮವಾಗಿ ಕಾರ್ಯನಿರ್ವಹಿಸುತ್ತಿದ್ದು, ನಿಮ್ಮ ಮನೆಯಿಂದಲೇ ತಡೆರಹಿತ ಬ್ಯಾಂಕಿಂಗ್ ಮಾಡಬಹುದು," ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.

ಇದೇ ವೇಳೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಸಂಜೆ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳ ಸೈಬರ್ ಭದ್ರತೆ ಸಿದ್ಧತೆಯ ಕುರಿತು ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

Read More
Next Story