ಬಿಭವ್ ಕುಮಾರ್ ಮೂರು ದಿನ ಪೊಲೀಸ್ ಕಸ್ಟಡಿಗೆ
ನವದೆಹಲಿ, ಮೇ 28: ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರಿಗೆ ನ್ಯಾಯಾಲಯ ಮೂರು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿದೆ.
ಮೇ 13 ರಂದು ಮುಖ್ಯಮಂತ್ರಿಯವರ ಅಧಿಕೃತ ನಿವಾಸದಲ್ಲಿ ಮಲಿವಾಲ್ ಮೇಲೆ ಹಲ್ಲೆ ನಡೆಸಲಾಗಿತ್ತು. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರು ಮೇ 31 ರವರೆಗೆ ಕುಮಾರ್ ಅವರನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಿದ್ದಾರೆ.
ದೆಹಲಿ ಪೊಲೀಸರು ಆರೋಪಿಯನ್ನು ಐದು ದಿನಗಳ ಕಸ್ಟಡಿಗೆ ಕೋರಿದ್ದರು. ಕುಮಾರ್ ಅವರ ವಕೀಲರು ದೆಹಲಿ ಪೊಲೀಸರ ಮನವಿಯನ್ನು ವಿರೋಧಿಸಿದರು. ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿದ್ದರು. ಕುಮಾರ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ಸೋಮವಾರ ವಜಾಗೊಳಿಸಿತು.
ಮೇ 18 ರಂದು ಕುಮಾರ್ ಅವರನ್ನು ಬಂಧಿಸಲಾಯಿತು. ಅದೇ ದಿನ ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಯಿತು.
Next Story