ಬಿಹಾರ: ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ತಡೆಗೆ ಮಸೂದೆ
ಪಾಟ್ನಾ, ಜು.24 - ರಾಜ್ಯದಲ್ಲಿ ಸರ್ಕಾರಿ ನೇಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಇತರ ಅವ್ಯವಹಾರಗಳನ್ನು ತಡೆಯುವ ಉದ್ದೇಶದಿಂದ ಬಿಹಾರ ವಿಧಾನಸಭೆಯು ಬುಧವಾರ ಮಸೂದೆಯನ್ನು ಅಂಗೀಕರಿಸಿದೆ.
ಬಿಹಾರ ಸಾರ್ವಜನಿಕ ಪರೀಕ್ಷೆಗಳ (ಪಿಇ) (ನ್ಯಾಯವಲ್ಲದ ಕ್ರಮಗಳ ತಡೆ) ಮಸೂದೆ, 2024 ನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಅವರು ಮಂಡಿಸಿದರು. ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಮಸೂದೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು.
ನೀಟ್-ಯುಜಿ 2024 ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಕೇಂದ್ರಬಿಂದುವಾಗಿರುವ ರಾಜ್ಯದಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ತಡೆಯುವ ಗುರಿಯನ್ನು ಹೊಸ ಶಾಸನ ಹೊಂದಿದೆ. ಅಕ್ರಮಗಳಲ್ಲಿ ಭಾಗಿಯಾದವರಿಗೆ ಮೂರರಿಂದ ಐದು ವರ್ಷ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ದಂಡ ಸೇರಿದಂತೆ ಕಠಿಣ ಶಿಕ್ಷೆಯನ್ನು ವಿಧಿಸಲಾಗುತ್ತದೆ.
Next Story