ಬಿಹಾರ ಚುನಾವಣೆ; 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು
x

ಬಿಹಾರ ಚುನಾವಣೆ; 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು

ಬಿಹಾರದಲ್ಲಿ ಒಟ್ಟು 243 ಕ್ಷೇತ್ರಗಳಿಗೆ ನ.6 ಹಾಗೂ 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಹಾಗೂ ಜೆಡಿಯು ತಲಾ 101 ಸೀಟು, ಲೋಕ ಜನಶಕ್ತಿ ಪಕ್ಷ 29 ಸ್ಥಾನ, ಹಿಂದುಸ್ತಾನಿ ಅವಾಮ್ ಮೋರ್ಚಾ 6 ಸ್ಥಾನ, ರಾಷ್ಟ್ರೀಯ ಲೋಕ ಮೋರ್ಚಾ 6 ಸ್ಥಾನಗಳನ್ನು ಹಂಚಿಕೊಂಡಿವೆ.

ಬಿಹಾರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಬುಧವಾರ ತನ್ನ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ನಡೆದ ಹಲವು ಸುತ್ತಿನ ಮಾತುಕತೆಯ ಬಳಿಕ ಬಿಜೆಪಿ ಹಾಗೂ ಜೆಡಿಯು ತಲಾ 101 ಕ್ಷೇತ್ರಗಳನ್ನು ಹಂಚಿಕೊಂಡಿದ್ದವು. ಇತರೆ ಮೈತ್ರಿಕೂಟದ ಪಕ್ಷಗಳಿಗೆ 41 ಸ್ಥಾನಗಳನ್ನು ಹಂಚಿಕೆ ಮಾಡಲಾಗಿತ್ತು.

ಬಿಹಾರದಲ್ಲಿ ಒಟ್ಟು 243 ಕ್ಷೇತ್ರಗಳಿಗೆ ನ.6 ಹಾಗೂ 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಹಾಗೂ ಜೆಡಿಯು ತಲಾ 101 ಸೀಟು, ಲೋಕ ಜನಶಕ್ತಿ ಪಕ್ಷ 29 ಸ್ಥಾನ, ಹಿಂದುಸ್ತಾನಿ ಅವಾಮ್ ಮೋರ್ಚಾ 6 ಸ್ಥಾನ, ರಾಷ್ಟ್ರೀಯ ಲೋಕ ಮೋರ್ಚಾ 6 ಸ್ಥಾನಗಳನ್ನು ಹಂಚಿಕೊಂಡಿವೆ.

ಚುನಾವಣಾ ಸಮರದ ಮೊದಲ ಪಟ್ಟಿಯಲ್ಲಿ ತನ್ನ ಪ್ರಮುಖ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಮುಂದಿನ ದಿನಗಳಲ್ಲಿ ಇನ್ನುಳಿದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ.

ಮಂಗಳವಾರವಷ್ಟೇ 71 ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಬಿಹಾರ ವಿಧಾನಸಭಾಧ್ಯಕ್ಷ ನಂದ ಕಿಶೋರ್ ಯಾದವ್, ಸಂಸ್ಕೃತಿ ಸಚಿವ ಮೋತಿಲಾಲ್ ಪ್ರಸಾದ್ ಸೇರಿದಂತೆ 16 ಶಾಸಕರಿಗೆ ಟಿಕೆಟ್ ನಿರಾಕರಿಸಿತ್ತು.

ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರನ್ನು ಕ್ರಮವಾಗಿ ತಾರಾಪುರ ಮತ್ತು ಲಖಿಸರಾಯ್ ಕ್ಷೇತ್ರಗಳಿಂದ ಕಣಕ್ಕಿಳಿಸಲಾಗಿದೆ. ವಿಜಯ್ ಕುಮಾ‌ರ್ ಸಿನ್ಹಾ ಅವರು ಪಟ್ನಾ ಹಾಗೂ ಲಿಖಿಸರಾಯ್ ಕ್ಷೇತ್ರದ ಮತದಾರರಾಗಿರುವುದು ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆಯ ಸಂದರ್ಭದಲ್ಲಿ ಬಯಲಿಗೆ ಬಂದಿತ್ತು.

Read More
Next Story