Three people were brutally murdered with deadly weapons in Kalaburagi
x
ಸಾಂದರ್ಭಿಕ ಚಿತ್ರ

ಬಿಹಾರದಲ್ಲಿ ಬಿಜೆಪಿ ಕಿಸಾನ್​​ ಮೋರ್ಚಾ ನಾಯಕನ ಗುಂಡಿಕ್ಕಿ ಹತ್ಯೆ

ಈ ಹತ್ಯೆಯು ಬಿಹಾರದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ವರ್ಷದಲ್ಲಿ ನಿತೀಶ್ ಕುಮಾರ್ ಸರ್ಕಾರಕ್ಕೆ ಇದು ದೊಡ್ಡ ಸವಾಲಾಗಿ ಪರಿಣಮಿಸಿದೆ. ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.


ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಮತ್ತೊಂದು ಆಘಾತಕಾರಿ ಕೊಲೆ ನಡೆದಿದೆ. ಪ್ರಮುಖ ಉದ್ಯಮಿ ಗೋಪಾಲ್ ಖೇಮ್ಕಾ ಅವರ ಹತ್ಯೆಯಾಗಿ ಒಂದು ವಾರ ಕಳೆಯುವ ಮೊದಲೇ, ಬಿಜೆಪಿ ನಾಯಕ ಸುರೇಂದ್ರ ಕೆವಾತ್ (52) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶೇಖ್‌ಪುರದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಸುರೇಂದ್ರ ಕೆವಾತ್ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದಾರೆ. ಕೆವಾತ್‌ಗೆ ನಾಲ್ಕು ಗುಂಡುಗಳು ತಗುಲಿದ್ದು, ಅವರನ್ನು ಪಾಟ್ನಾದ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪೊಲೀಸ್ ಅಧಿಕಾರಿ ಕಾನ್ಹೈಯಾ ಸಿಂಗ್ ಈ ಬಗ್ಗೆ ಮಾಹಿತಿ ನೀಡಿ, "ಸುರೇಂದ್ರ ಕೆವಾತ್ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಅಪರಿಚಿತರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೇಳೆಯೂ ಅವರು ನಿಧನರಾದರು. ನಾವು ಅವರ ಕುಟುಂಬದಿಂದ ಹೇಳಿಕೆಗಳನ್ನು ಪಡೆದಿದ್ದು, ತನಿಖೆ ನಡೆಯುತ್ತಿದೆ" ಎಂದು ಹೇಳಿದರು. ಸುರೇಂದ್ರ ಕೆವಾತ್ ಈ ಹಿಂದೆ ಬಿಜೆಪಿ ಕಿಸಾನ್ ಮೋರ್ಚಾದ ನಾಯಕರಾಗಿದ್ದರು. ಇತ್ತೀಚಿನ ಈ ಸರಣಿ ಹತ್ಯೆಗಳು ಪಾಟ್ನಾದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿವೆ.

ರಾಜಕೀಯ ತಿಕ್ಕಾಟ ತೀವ್ರ

ಈ ಹತ್ಯೆಯು ಬಿಹಾರದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ವರ್ಷದಲ್ಲಿ ನಿತೀಶ್ ಕುಮಾರ್ ಸರ್ಕಾರಕ್ಕೆ ಇದು ದೊಡ್ಡ ಸವಾಲಾಗಿ ಪರಿಣಮಿಸಿದೆ. ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ತಮ್ಮ 'ಎಕ್ಸ್' ಖಾತೆಯಲ್ಲಿ ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. "ಪಾಟ್ನಾದಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಎನ್‌ಡಿಎ ಸರ್ಕಾರದಲ್ಲಿ ಯಾರು ಸತ್ಯವನ್ನು ಕೇಳಲು ಅಥವಾ ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳಲು ಸಿದ್ಧರಿದ್ದಾರೆ" ಎಂದು ಪ್ರಶ್ನಿಸಿದ್ದಾರೆ. "ಮುಖ್ಯಮಂತ್ರಿಯ ಆರೋಗ್ಯದ ಬಗ್ಗೆ ಎಲ್ಲರಿಗೂ ತಿಳಿದಿದೆ, ಆದರೆ ಇಬ್ಬರು ಬಿಜೆಪಿ ಉಪಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ?" ಎಂದು ಟೀಕಿಸಿದ್ದಾರೆ.

ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಕೂಟವು ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಬಿಜೆಪಿ-ಜೆಡಿಯು ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ. ಈ ಹಿಂದೆ ರಾಹುಲ್ ಗಾಂಧಿ ಕೂಡ "ಬಿಹಾರ ಇಂದು ಲೂಟಿ, ಗುಂಡು ಮತ್ತು ಹತ್ಯೆಯ ನೆರಳಿನಲ್ಲಿ ಜೀವಿಸುತ್ತಿದೆ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ" ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ, "ಆರ್‌ಜೆಡಿ ಅಪರಾಧಿಗಳನ್ನು ಬೆಂಬಲಿಸಿ ರಾಜ್ಯ ಸರ್ಕಾರವನ್ನು ಕೆಟ್ಟದಾಗಿ ತೋರಿಸುತ್ತಿದೆ" ಎಂದು ಆರೋಪಿಸಿದ್ದಾರೆ.

Read More
Next Story