
ರಾಜಕೀಯಕ್ಕೆ ಗುಡ್ ಬೈ ಎಂದ ಗೌತಮ್ ಗಂಭೀರ್
ರಾಜಕೀಯಕ್ಕೆ ಗುಡ್ ಬೈ ಎಂದ ಬಿಜೆಪಿ ಸಂಸದ ಗೌತಮ್ ಗಂಭೀರ್
ಹೊಸದಿಲ್ಲಿ: ಬಿಜೆಪಿ ಲೋಕಸಭಾ ಸಂಸದ ಗೌತಮ್ ಗಂಭೀರ್ ಅವರು ಪಕ್ಷಕ್ಕೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಖಾತೆ x ನಲ್ಲಿ ಸಂದೇಶ ಪೋಸ್ಟ್ ಮಾಡಿರುವ ಅವರು ರಾಜಕೀಯ ಕರ್ತವ್ಯಗಳಿಂದ ತನ್ನನ್ನು ಮುಕ್ತಗೊಳಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಕೇಳಿಕೊಂಡಿದ್ದಾರೆ.
ಜನರ ಸೇವೆ ಮಾಡಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದವನ್ನು ಅರ್ಪಿಸಿದ್ದಾರೆ.
"ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಗೌರವಾನ್ವಿತ ಅಧ್ಯಕ್ಷ ಜೆಪಿ ನಡ್ಡಾ ಜಿ ಅವರನ್ನು ವಿನಂತಿಸಿದ್ದೇನೆ, ಇದರಿಂದಾಗಿ ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ನಾನು ಗಮನಹರಿಸಬಹುದು. ಜನರ ಸೇವೆ ಮಾಡಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಜಿ ಮತ್ತು ಗೃಹ ಸಚಿವ ಅಮಿತ್ ಶಾ ಜಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಜೈ ಹಿಂದ್!" ಎಂದು ಗಂಭೀರ್ X ನಲ್ಲಿ ಪೋಸ್ಟ್ ಮಾಡಿದ್ದಾರೆ.
Next Story