ಒಡಿಷಾ ಸಿಎಂ: ಮೋಹನ್ ಚರಣ್ ಮಾಝಿ ಪ್ರಮಾಣವಚನ ಸ್ವೀಕಾರ
x

ಒಡಿಷಾ ಸಿಎಂ: ಮೋಹನ್ ಚರಣ್ ಮಾಝಿ ಪ್ರಮಾಣವಚನ ಸ್ವೀಕಾರ


ನಾಲ್ಕು ಬಾರಿ ಆಯ್ಕೆಯಾಗಿರುವ ಶಾಸಕ ಮತ್ತು ಬುಡಕಟ್ಟು ನಾಯಕ ಮೋಹನ್ ಚರಣ್ ಮಾಝಿ ಅವರು ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಬುಧವಾರ (ಜೂನ್ 12) ಅಧಿಕಾರ ವಹಿಸಿಕೊಂಡರು.

ಜನತಾ ಮೈದಾನದಲ್ಲಿ ರಾಜ್ಯಪಾಲ ರಘುಬರ್ ದಾಸ್, ಮಾಝಿ ಅವರಿಗೆ ಪ್ರಮಾಣವಚನ ಬೋಧಿಸಿದರು. ಬಿಜೆಪಿಯ ಹಿರಿಯ ನಾಯಕ ಮತ್ತು ಪಟ್‌ನಗರದ ಶಾಸಕ ಕೆ.ವಿ. ಸಿಂಗ್ ದೇವ್ ಮತ್ತು ನಿಮಾಪಾರ ಕ್ಷೇತ್ರದ ಶಾಸಕ ಪ್ರವತಿ ಪರಿದಾ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ಭೂಪೇಂದರ್ ಯಾದವ್, ಧರ್ಮೇಂದ್ರ ಪ್ರಧಾನ್, ಜುಯಲ್ ಓರಮ್, ಅಶ್ವಿನಿ ವೈಷ್ಣವ್, ಉತ್ತರ ಪ್ರದೇಶ, ಗೋವಾ, ರಾಜಸ್ಥಾನ, ಮಧ್ಯಪ್ರದೇಶ, ಅಸ್ಸಾಂ, ಗುಜರಾತ್, ಛತ್ತೀಸ್‌ಗಢ ಮತ್ತು ಉತ್ತರಾಖಂಡ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು. ಒಡಿಶಾದ ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಿದೆ. 147 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 78, ಬಿಜೆಡಿ 51, ಕಾಂಗ್ರೆಸ್ 14, ಸಿಪಿಐ(ಎಂ) ಒಂದು ಹಾಗೂ ಮೂವರು ಸ್ವತಂತ್ರ ಶಾಸಕರು ಇದ್ದಾರೆ.

Read More
Next Story