ಆಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
ಹೊಸದಿಲ್ಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಆಡ್ವಾಣಿ(96) ಅವರನ್ನು ಮಂಗಳವಾರ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಅವಿಭಜಿತ ಭಾರತದಲ್ಲಿ ಜನಿಸಿದ ಅವರನ್ನು ಇಲ್ಲಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಜುಲೈ ಮೊದಲ ವಾರದಲ್ಲಿ ಆಡ್ವಾಣಿ ಅವರನ್ನು ಅಪೋಲೋಗೆ ಕರೆತಂದು ಒಂದೆರಡು ದಿನ ಕಾಲ ನಿಗಾದಲ್ಲಿರಿಸಿ, ನಂತರ ಬಿಡುಗಡೆ ಮಾಡಲಾಯಿತು. ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ.ವಿನಿತ್ ಸೂರಿ ಅವರ ನೇತೃತ್ವದಲ್ಲಿ ದಾಖಲಾಗಿದ್ದರು. ಅದಕ್ಕೂ ಮೊದಲು ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್)ಗೆ ದಾಖಲಿಸಲಾಗಿತ್ತು. ಅಲ್ಲಿ ಒಂದು ರಾತ್ರಿ ಕಳೆದ ಬಳಿಕ ಬಿಡುಗಡೆ ಮಾಡಲಾಗಿತ್ತು.
Next Story