LK Advani | ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು
ಸೂರಿ ಅವರು ನ್ಯೂರಾಲಜಿ ವಿಭಾಗದಲ್ಲಿ ಹಿರಿಯ ಸಲಹೆಗಾರರಾಗಿದ್ದಾರೆ. ಆದಾಗ್ಯೂ,ಅವರನ್ನು ಆಸ್ಪತ್ರೆಗೆ ಯಾಕೆ ದಾಖಲಿಸಲಾಗಿದೆ ಎಂಬುದಕ್ಕೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ
ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆ ದಾಖಲಿಸಲಾಗಿದೆ.ಅವರರಿಗೆ ಐಸಿಯುನಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ.
"ಭಾರತದ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಜಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ" ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಡಾ.ವಿನೀತ್ ಸೂರಿ ಅವರ ಅವರು ಚಿಕಿತ್ಸೆ ನೀಡುತ್ತಿದ್ದಾರೆ.ಅವರಆರೋಗ್ಯ ಸ್ಥಿತಿ ಸ್ಥಿರವಾಗಿದೆ" ಎಂದು ಆಸ್ಪತ್ರೆಯು ಮಾಹಿತಿ ನೀಡಿದೆ.
ಸೂರಿ ಅವರು ನ್ಯೂರಾಲಜಿ ವಿಭಾಗದಲ್ಲಿ ಹಿರಿಯ ಸಲಹೆಗಾರರಾಗಿದ್ದಾರೆ.ಆದಾಗ್ಯೂ,ಅವರನ್ನು ಆಸ್ಪತ್ರೆಗೆ ಯಾಕೆ ದಾಖಲಿಸಲಾಗಿದೆ ಎಂಬುದಕ್ಕೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.96 ವರ್ಷದ ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಈ ವರ್ಷದ ಆರಂಭದಲ್ಲಿ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧಾರಿಸಿಕೊಂಡ ಅವರನ್ನು ಬಳಿಕ ಬಿಡುಗಡೆಗೊಳಿಸಲಾಗಿತ್ತು.
Next Story