Delhi Blast | ದೆಹಲಿಯ ಪಿವಿಆರ್ ಬಳಿ ಸ್ಫೋಟ; ಒಬ್ಬರಿಗೆ ಗಾಯ
ಕಳೆದ ತಿಂಗಳು ಪ್ರಶಾಂತ್ ವಿಹಾರ್‌ನಲ್ಲಿರುವ ಸಿಆರ್‌ಪಿಎಫ್ ಶಾಲೆಯಲ್ಲಿ ಸ್ಫೋಟ ಸಂಭವಿಸಿ ನಗರದಾದ್ಯಂತ ಭೀತಿ ಉಂಟುಮಾಡಿತು. ಸ್ಫೋಟದ ಹಿನ್ನೆಲೆಯಲ್ಲಿ ಪೊಲೀಸರು ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.
ದೆಹಲಿಯ ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದ ಪಿವಿಆರ್ ಬಳಿ ಗುರುವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ. ಈ ಘಟನೆ ರಾಷ್ಟ್ರರಾಜಧಾನಿಯ ಈ ಪ್ರದೇಶದಲ್ಲಿ ಭೀತಿ ಸೃಷ್ಟಿಸಿದೆ. ಗುರುವಾರ ಬೆಳಿಗ್ಗೆ 11.48ಕ್ಕೆ ಸ್ಫೋಟಕ್ಕೆ ಸಂಬಂಧಿಸಿದ ಕರೆ ಬಂದಿದೆ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಒಬ್ಬರಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೆಹಲಿ ಪೊಲೀಸ್ ಅಪರಾಧ ವಿಭಾಗ, ವಿಶೇಷ ಸೆಲ್ ಮತ್ತು ಬಾಂಬ್ ನಿಷ್ಕ್ರಿಯ ದಳದ ತಂಡಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದೆ.
ಕಳೆದ ತಿಂಗಳು ಪ್ರಶಾಂತ್ ವಿಹಾರ್‌ನಲ್ಲಿರುವ ಸಿಆರ್‌ಪಿಎಫ್ ಶಾಲೆಯಲ್ಲಿ ಸ್ಫೋಟ ಸಂಭವಿಸಿ ನಗರದಾದ್ಯಂತ ಭೀತಿ ಉಂಟುಮಾಡಿತು. ಸ್ಫೋಟದ ಹಿನ್ನೆಲೆಯಲ್ಲಿ ಪೊಲೀಸರು ನಗರದಲ್ಲಿ ಹೈ ಅಲರ್ಟ್ ಘೋಷಿಸಿದ್ದಾರೆ.
ಕಚ್ಚಾ ಬಾಂಬ್‌ನಿಂದಾಗಿ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯದಲ್ಲಿ, ಸ್ಫೋಟದ ತೀವ್ರತೆಗೆ ಶಾಲೆಯ ಗೋಡೆಯ ಒಂದು ಭಾಗ, ಹತ್ತಿರದ ಅಂಗಡಿಗಳ ಕಿಟಕಿಗಳಿಗೆ ಹಾನಿಯಾಗಿವೆ. ಜತೆಗೆ ಕೆಲವು ಕಾರುಗಳಿಗೂ ಹಾನಿಯಾಗಿವೆ,
ನೂರು ಮೀಟರ್ ದೂರಕ್ಕೆ ಸದ್ದು
ಸ್ಫೋಟದ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ), ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್‌ಜಿ), ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ದೆಹಲಿ ಪೊಲೀಸರ ತಂಡಗಳು ಪರಿಶೀಲನೆ ನಡೆಸುತ್ತಿವೆ. ವಿಧಿವಿಜ್ಞಾನ ತಜ್ಞರು ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿದ್ದಾರೆ.