ಕೊಲ್ಕತ್ತಾದ ಏಳು ವಿಮಾನಗಳಿಗೆ ಬಾಂಬ್‌ ಬೆದರಿಕೆ; ತಪ್ಪದ ಹುಸಿ ಬೆದರಿಕೆಗಳ ತಲೆಬೇನೆ
x

ಕೊಲ್ಕತ್ತಾದ ಏಳು ವಿಮಾನಗಳಿಗೆ ಬಾಂಬ್‌ ಬೆದರಿಕೆ; ತಪ್ಪದ ಹುಸಿ ಬೆದರಿಕೆಗಳ ತಲೆಬೇನೆ

ಕೋಲ್ಕತ್ತಾ ವಿಮಾನ ನಿಲ್ದಾಣದ ಏಳು ವಿಮಾನಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂಬ ಸಂದೇಶವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.


ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆ ಮುಂದುವರಿದಿದೆ. ಸೋಮವಾರ ಕೋಲ್ಕತ್ತಾ ವಿಮಾನ ನಿಲ್ದಾಣದ ಏಳು ವಿಮಾನಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ ಎಂದು ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಕೋಲ್ಕತ್ತಾ ವಿಮಾನ ನಿಲ್ದಾಣದ ಏಳು ವಿಮಾನಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂಬ ಸಂದೇಶವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಹೊರಡುವ ವಿಮಾನಗಳನ್ನು ತಪಾಸಣೆ ನಡೆಸಿದರು. ಯಾವುದೇ ಬಾಂಬ್‌ ಪತ್ತೆಯಾಗಿಲ್ಲ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಡಾ.ಪ್ರವತ್ ರಂಜನ್ ಬ್ಯೂರಿಯಾ ಹೇಳಿದ್ದಾರೆ.

ಏಳು ವಿಮಾನಗಳ ಪೈಕಿ ಐದು ಇಂಡಿಗೋ ಮತ್ತು ಎರಡು ವಿಸ್ತಾರಾ ಏರ್‌ಲೈನ್ಸ್‌ಗೆ ಸೇರಿವೆ. ನಿರಂತರ ಬಾಂಬ್‌ ಬೆದರಿಕೆ ಕರೆ ಹಾಗೂ ಸಂದೇಶಗಳಿಂದ ಆತಂಕ ಎದುರಾಗಿದ್ದು, ಬಾಂಬ್ ಬೆದರಿಕೆ ಮೌಲ್ಯಮಾಪನ ಸಮಿತಿ (BTAC) ತುರ್ತು ಸಭೆ ನಡೆಸಿತು.

15 ದಿನಗಳಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳಿಗೆ ಒಟ್ಟು 410 ಕ್ಕೂ ಹೆಚ್ಚು ಹುಸಿ ಬಾಂಬ್ ಬೆದರಿಕೆಗಳು ಬಂದಿವೆ.

Read More
Next Story