
ಬಿಆರ್‌ಎಸ್ ನಾಯಕಿ ಕವಿತಾ
ಬಿಆರ್‌ಎಸ್ ನಾಯಕಿ ಕವಿತಾ ಅರೆಸ್ಟ್!
ದೆಹಲಿ ಮದ್ಯ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಬಿಆರ್‌ಎಸ್ ನಾಯಕಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಟಿ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಬಂಧಿಸಿದೆ.
ಹೈದರಬಾದ್: ದೆಹಲಿ ಮದ್ಯ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಬಿಆರ್‌ಎಸ್ ನಾಯಕಿ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಟಿ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಬಂಧಿಸಿದೆ.
ಇಂದು ಕವಿತಾ ಅವರ ಹೈದರಾಬಾದ್ ನಿವಾಸದ ಮೇಲೆ ಇಡಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿತ್ತು. ಈ ವೇಳೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು ಸಂಜೆ ವೇಳೆ ವಿಧಾನ ಪರಿಷತ್ ಸದಸ್ಯೆಯಾಗಿರುವ ಕವಿತಾ ಅವರನ್ನು ಬಂಧಿಸಿದ್ದಾರೆ.
ಕವಿತಾ ಅವರು 100 ಕೋಟಿ ರೂಪಾಯಿ ಕಿಕ್‌ಬ್ಯಾಕ್ ಪಾವತಿಸಿದ ಮದ್ಯದ ಕಾರ್ಟೆಲ್ ‘ದಿ ಸೌತ್ ಗ್ರೂಪ್’ ನ ಭಾಗವಾಗಿದ್ದರು ಎಂದು ಇಡಿ ಆರೋಪಿಸಿದೆ.
Next Story