BSF Recruitment: Applications invited for 549 constable posts; Golden opportunity for athletes
x

ಎಐ ಆಧಾರಿತ ಚಿತ್ರ

ಕ್ರೀಡಾಪಟುಗಳಿಗೆ ಸೇನೆ ಸೇರುವ ಸುವರ್ಣಾವಕಾಶ: ಬಿಎಸ್‌ಎಫ್‌ನಲ್ಲಿ 549 ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ

ಡಿಸೆಂಬರ್‌ 27ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 159 ರೂ. ಹಾಗೂ ಎಸ್‌ಸಿ, ಎಸ್‌ಟಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯಿದೆ.


Click the Play button to hear this message in audio format

ಗಡಿ ಭದ್ರತಾ ಪಡೆ (ಬಿಎಸ್‌ಎಫ್) 2025 ರ ಕ್ರೀಡಾ ಕೋಟಾದ ಅಡಿಯಲ್ಲಿ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಭಾರತದ ಸೇನೆಗೆ ಸೇರಲು ಯುವ ಕ್ರೀಡಾಪಟುಗಳಿಗೆ ಇದೊಂದು ದೊಡ್ಡ ಅವಕಾಶವಾಗಿದೆ.

ಗ್ರೂಪ್ 'ಸಿ' ನಾನ್-ಗೆಜೆಟೆಡ್ ಮತ್ತು ನಾನ್-ಮಿನಿಸ್ಟೀರಿಯಲ್ ಹುದ್ದೆಗಳಿಗೆ ನೇಮಕಾತಿ. ಆಯ್ಕೆಯಾದ ಅಭ್ಯರ್ಥಿಗಳು ದೇಶಕ್ಕೆ ಸೇವೆ ಸಲ್ಲಿಸುವುದಲ್ಲದೆ, ವಿವಿಧ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಬಿಎಸ್‌ಎಫ್ ಅನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆಯುತ್ತಾರೆ.

549 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಪುರುಷ ಮತ್ತು ಮಹಿಳಾ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಸೆಂಬರ್‌ 27ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 159 ರೂ. ಹಾಗೂ ಪರಿಶಿಷ್ಟ ಜಾತಿ, ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಸಂಬಳ

ಗಡಿ ಭದ್ರತಾ ಪಡೆಯ ಕಾನ್ಸ್‌ಟೇಬಲ್ ಹಂತ-3 ನೇ ಹುದ್ದೆಯಾಗಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ 21,700 - 69,100 ರೂ. ಹಾಗೂ ಮೂಲ ವೇತನದ ಜೊತೆಗೆ, ನೀವು ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ತುಟ್ಟಿ ಭತ್ಯೆ (DA), ನಿವೇಶನ ಭತ್ಯೆ, ಪಡಿತರ ಹಣ ಭತ್ಯೆ, ಉಡುಗೆ ಭತ್ಯೆ ಮತ್ತು ಇತರ ಪ್ರಯೋಜನಗಳಿಗೆ ಅರ್ಹರಾಗಿರುತ್ತೀರಿ.

ಅರ್ಹತಾ ಮಾನದಂಡಗಳೇನು ?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಗಿನ ಮಾನದಂಡಗಳನ್ನು ಪೂರೈಸಬೇಕು.

ಶೈಕ್ಷಣಿಕ ಅರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಕ್ರೀಡಾ ಅರ್ಹತೆ: 2024 ಜನವರಿ 15ರಿಂದ 2026 ಜನವರಿ 15ರ ನಡುವೆ ಅಂತರರಾಷ್ಟ್ರೀಯ ಅಥವಾ ರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾಗವಹಿಸಿದ ಅಥವಾ ಪದಕಗಳನ್ನು ಗೆದ್ದ ಆಟಗಾರರು ಅರ್ಜಿ ಸಲ್ಲಿಸಬಹುದು.

ವೈಯಕ್ತಿಕ ಸ್ಪರ್ಧೆಗಳಲ್ಲಿ ಅಂತರರಾಷ್ಟ್ರೀಯ ಕ್ರೀಡಾ ಸಂಸ್ಥೆಗಳಿಂದ ಗುರುತಿಸಲ್ಪಟ್ಟ ಪಂದ್ಯಾವಳಿಗಳಲ್ಲಿ ಭಾಗವಹಿಸಿರಬೇಕು ಅಥವಾ ಪದಕ ವಿಜೇತರಾಗಿರಬೇಕು. ರಾಷ್ಟ್ರೀಯ ಕ್ರೀಡಾಕೂಟ, ಹಿರಿಯ ರಾಷ್ಟ್ರೀಯ ಚಾಂಪಿಯನ್‌ಶಿಪ್, ರಾಷ್ಟ್ರೀಯ ಮುಕ್ತ ಚಾಂಪಿಯನ್‌ಶಿಪ್ ಅಥವಾ ಜೂನಿಯರ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಪದಕ ವಿಜೇತರಾಗಿರಬೇಕು.

ತಂಡವಾಗಿ ಸ್ಪರ್ಧೆ ಮಾಡಿದ್ದರೆ, ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿರಬೇಕು ಅಥವಾ ಪದಕ ವಿಜೇತರಾಗಿರಬೇಕು. ರಾಷ್ಟ್ರೀಯ ಕ್ರೀಡಾಕೂಟ, ಹಿರಿಯ ರಾಷ್ಟ್ರೀಯ ಚಾಂಪಿಯನ್‌ಶಿಪ್ ಇತ್ಯಾದಿಗಳಲ್ಲಿ ಪದಕ ವಿಜೇತರಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2025 ಆಗಸ್ಟ್‌ 1ಕ್ಕೆ ಕನಿಷ್ಠ 18 ವರ್ಷ ವಯಸ್ಸು, ಗರಿಷ್ಠ 23 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಐದು ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಇದೆ.

ಏನಿದು ಬಿಎಸ್‌ಎಫ್‌ ?

ಬಿಎಸ್‌ಎಫ್‌ ಭಾರತದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಒಂದಾಗಿದೆ. ಡಿಸೆಂಬರ್ 1, 1965 ರಂದು ಸ್ಥಾಪನೆಯಾದ ಇದು ಶಾಂತಿಕಾಲದಲ್ಲಿ ಭಾರತದ ಭೂ ಗಡಿಯನ್ನು ಕಾಪಾಡುವ ಮತ್ತು ಅಂತರರಾಷ್ಟ್ರೀಯ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿಯನ್ನು ಹೊಂದಿದೆ. ಇದು ಗೃಹ ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿದೆ.

Read More
Next Story