ಕಾವೇರಿ: ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತಮಿಳುನಾಡು ನಿರ್ಧಾರ
ಕರ್ನಾಟಕದಿಂದ ರಾಜ್ಯಕ್ಕೆ ಕಾವೇರಿ ನೀರು ಪಡೆಯಲು ಅಗತ್ಯವಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತಮಿಳುನಾಡು ವಿಧಾನಸಭೆಯಲ್ಲಿ ಮಂಗಳವಾರ (ಜುಲೈ 16) ನಡೆದ ಶಾಸಕಾಂಗ ಪಕ್ಷದ ನಾಯಕರ ಸಭೆಯಲ್ಲಿ ನಿರ್ಧರಿಸಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ದೇಶನದಂತೆ ಪ್ರತಿದಿನ ಒಂದು ಟಿಎಂಸಿ ಅಡಿ ನೀರು ಬಿಡಲು ನಿರಾಕರಿಸುತ್ತಿರುವ ಕರ್ನಾಟಕ ಸರ್ಕಾರವನ್ನು ತೀವ್ರವಾಗಿ ಖಂಡಿಸಲಾಯಿತು.
ಕಾವೇರಿ ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಪಾಲಿಸುವಂತೆ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಮತ್ತೊಂದು ನಿರ್ಣಯದಲ್ಲಿ ಒತ್ತಾಯಿಸಲಾಗಿದೆ.
Next Story