ಪ್ರಧಾನಿ ಭೇಟಿ ಮಾಡಿದ ನಾಯ್ಡು: ಆಂಧ್ರಕ್ಕೆ ಕೇಂದ್ರದ ಬೆಂಬಲಕ್ಕೆ ಕೋರಿಕೆ
ಪ್ರಧಾನಿ ಅವರನ್ನು ಭೇಟಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಬೆಂಬಲವನ್ನು ಕೋರಿದರು.
ನವದೆಹಲಿ, ಜು.4 - ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಬೆಂಬಲವನ್ನು ಕೋರಿದರು.
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಪ್ರಮುಖ ಪಾಲುದಾರನಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ)ದ ಮುಖ್ಯಸ್ಥ ನಾಯ್ಡು ಅವರು ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನ ನೀಡಲು ಸಾಧ್ಯವಾಗದಿದ್ದರೆ, ಹೆಚ್ಚಿನ ನೆರವು ನೀಡಬೇಕೆಂದು ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎರಡು ದಿನಗಳ ನವದೆಹಲಿ ಭೇಟಿಯಲ್ಲಿರುವ ನಾಯ್ಡು, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಪಿಯೂಷ್ ಗೋಯಲ್ ಅವರೊಂದಿಗೆ ಆಂಧ್ರಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು.
ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರೋಗ್ಯ ಸಚಿವ ಜೆ.ಪಿ. ನಡ್ಡಾ ಸೇರಿದಂತೆ ಹಲವು ಕೇಂದ್ರ ಸಚಿವರನ್ನು ನಾಯ್ಡು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story