Dantewada encounter | ಒಂಬತ್ತು ಮಾವೋವಾದಿಗಳ ಹತ್ಯೆ
x

Dantewada encounter | ಒಂಬತ್ತು ಮಾವೋವಾದಿಗಳ ಹತ್ಯೆ

ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ತಂಡವು ಕಾರ್ಯಾಚರಣೆ ನಡೆಸುತ್ತಿದೆ. ಕಾರ್ಯಾಚರಣೆ ಮಂಗಳವಾರ ಮುಂಜಾನೆಯಿಂದ ಆರಂಭಗೊಂಡಿದೆ.


ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮಂಗಳವಾರ (ಸೆಪ್ಟೆಂಬರ್ 3) ನಡೆಸಿದ ಎನ್‌ಕೌಂಟರ್‌ನಲ್ಲಿ ಒಂಬತ್ತು ಮಾವೋವಾದಿಗಳು ಹತರಾಗಿದ್ದಾರೆ. ಬೆಳಗ್ಗೆ 10.30ಕ್ಕೆ ಆರಂಭವಾದ ಎನ್‌ಕೌಂಟರ್ ಮುಂದುವರಿದಿದೆ.

ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿ ಬಗ್ಗೆ ಗುಪ್ತಚರ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಎನ್‌ಕೌಂಟರ್ ಬೆಳಗ್ಗೆ 10:30 ರ ಸುಮಾರಿಗೆ ಪ್ರಾರಂಭವಾಗಿದ್ದು, ಒಂಬತ್ತು ಮಾವೋವಾದಿಗಳು ಕೊಲ್ಲಲ್ಪಟ್ಟಿದ್ದಾರೆ. ಸೆಲ್ಫ್ ಲೋಡಿಂಗ್ ರೈಫಲ್ (ಎಸ್‌ಎಲ್‌ಆರ್), .303 ರೈಫಲ್ ಮತ್ತು .315 ರೈಫಲ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಯೋಧರು ಸುರಕ್ಷಿತವಾಗಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

Read More
Next Story