ಉಪರಾಷ್ಟ್ರಪತಿ ಹುದ್ದೆ | ಪ್ರಧಾನಿ ಮೋದಿ, ಕೇಂದ್ರ ಸಚಿವರನ್ನು ಭೇಟಿಯಾದ ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್
x

ಬಿಜೆಪಿಯ ಅನುಭವಿ ನಾಯಕರಾದ ರಾಧಾಕೃಷ್ಣನ್ 

ಉಪರಾಷ್ಟ್ರಪತಿ ಹುದ್ದೆ | ಪ್ರಧಾನಿ ಮೋದಿ, ಕೇಂದ್ರ ಸಚಿವರನ್ನು ಭೇಟಿಯಾದ ಎನ್‌ಡಿಎ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್

ಬಿಜೆಪಿಯ ಅನುಭವಿ ನಾಯಕರಾದ ರಾಧಾಕೃಷ್ಣನ್ (67) ಅವರು ಪ್ರಸ್ತುತ ಮಹಾರಾಷ್ಟ್ರ ರಾಜ್ಯಪಾಲರಾಗಿದ್ದು, ತಮಿಳುನಾಡು ಮೂಲದವರಾಗಿದ್ದಾರೆ.


ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಸಿ.ಪಿ. ರಾಧಾಕೃಷ್ಣನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರು ಸನ್ಮಾನಿಸಿದರು.

ಉಪರಾಷ್ಟ್ರಪತಿ ಹುದ್ದೆಗೆ ಸಿ.ಪಿ. ರಾಧಾಕೃಷ್ಣನ್ ಅವರು ಬುಧವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ರಾಧಾಕೃಷ್ಣನ್‌ ಅವರು ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದರು. ಬಳಿಕ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ರಾಧಾಕೃಷ್ಣನ್‌ ಅವರನ್ನು ಅಭಿನಂದಿಸಿದರು.

ಬಿಜೆಪಿಯ ಅನುಭವಿ ನಾಯಕರಾದ ರಾಧಾಕೃಷ್ಣನ್ (67) ಪ್ರಸ್ತುತ ಮಹಾರಾಷ್ಟ್ರ ರಾಜ್ಯಪಾಲರಾಗಿದ್ದು, ತಮಿಳುನಾಡು ಮೂಲದವರು. ರಾಧಾಕೃಷ್ಣನ್ ಅವರನ್ನು ಎನ್‌ಡಿಎ ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಅವರ ಗೆಲುವು ನಿಶ್ಚಿತವಾಗಿದೆ ಎಂದು ಆಶಿಸಿದ್ದಾರೆ.

ಈ ಮಧ್ಯೆ, ವಿರೋಧ ಪಕ್ಷಗಳ ಒಕ್ಕೂಟವಾದ 'ಇಂಡಿಯಾ' ತಮ್ಮ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಸ್ಪರ್ಧೆ ನೀಡುವ ಸಾಧ್ಯತೆ ಇದೆ.

Read More
Next Story